
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಭಾನುವಾರ ಸವದತ್ತಿಗೆ ಆಗಮಿಸಲಿದ್ದಾರೆ.
ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಹಾಗೂ ಮಹಿಳಾ ಅಭಿವೃದ್ಧಿ ನಿಗಮಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ.
ಬೆಳಗ್ಗೆ 11.30ಕ್ಕೆ ಮೈಸೂರಿನಿಂದ ವಿಶೇಷ ವಿಮಾನದಲ್ಲಿ ಹೊರಟು, 12.30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು, ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು 1.25ಕ್ಕೆ ರಸ್ತೆ ಮಾರ್ಗದಲ್ಲಿ ಸವದತ್ತಿ ತಲುಪಲಿದ್ದಾರೆ.
ಕಾರ್ಯಕ್ರಮದಲ್ಲಿ ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ, ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರಡ್ಡಿ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಜಿಲ್ಲೆಯ ಸಂಸದರು, ಶಾಸಕರು ಭಾಗವಹಿಸಲಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ