
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವಿಧಾನಮಂಡಲದ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಬೆಳಗಾವಿಗೆ ಭಾನುವಾರ ರಾತ್ರಿ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸ್ವಾಗತಿಸಿದರು.
ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಶಿಗ್ಗಾವಿ ಕ್ಷೇತ್ರದ ಕೃತಜ್ಞತಾ ಸಮಾರಂಭ ಮುಗಿಸಿ ವಿಶೇಷ ವಿಮಾನದಲ್ಲಿ ಭಾನುವಾರ ರಾತ್ರಿ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದಿಳಿದರು.
ಈ ವೇಳೆ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ,
ವಿಧಾನಸಭೆಯ ಮುಖ್ಯ ಸಚೇತಕರು ಹಾಗೂ ರಾಮದುರ್ಗ ಶಾಸಕರಾದ ಅಶೋಕ ಪಟ್ಟಣ, ಶಂಕರಗೌಡ ಪಾಟೀಲ, ನಾಗೇಶ ದೇಸಾಯಿ, ಶ್ರೀಕಾಂತ್ ಮಾಧುಭರಮಣ್ಣವರ್ ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ