
ಆಸ್ಪತ್ರೆಗೆ ತೆರಳಿ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಸಿಎಂ, ಡಿಸಿಎಂ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್ ಅವರು ಶನಿವಾರ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಅವರು ಜತೆಗಿದ್ದರು.
ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಹ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಶನಿವಾರ ಸಂಜೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.