Latest

ನನ್ನ ಸಹೋದರನನ್ನೇ ಕಳೆದುಕೊಂಡಷ್ಟು ನೋವಾಗಿದೆ; ಕಂಬನಿ ಮಿಡಿದ ನಟ ರಾಮ್ ಚರಣ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ಕಳೆದುಕೊಂಡಿರುವ ಇಡೀ ಭಾರತೀಯ ಚಿತ್ರರಂಗವೇ ಇಂದು ಕಣ್ಣೀರ ಕಡಲಲ್ಲಿ ಮುಳುಗಿದೆ. ಕನ್ನಡ ಮಾತ್ರವಲ್ಲ ಪರಭಾಷಾ ನಟ-ನಟಿಯರು ಕೂಡ ಪುನೀತ್ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ. ಪುನೀತ್ ರಾಜ್ ಕುಮಾರ್ ಅಗಲಿಕೆ ಸಹೋದರನನ್ನೇ ಕಳೆದುಕೊಂಡಷ್ಟು ನೋವಾಗಿದೆ ಎಂದು ಟಾಲಿವುಡ್ ನಟ ರಾಮ್ ಚರಣ್ ತೇಜ ಕಂಬನಿ ಮಿಡಿದಿದ್ದಾರೆ.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ತೆಲುಗು ನಟ ರಾಮ್ ಚರಣ್ ತೇಜಾ, ಬೆಂಗಳೂರಿನ ಸದಾಶಿವನಗರದ ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ಆಗಮಿಸಿ ಪುನೀತ್ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.

ಈ ವೇಳೆ ಮಾತನಾಡಿದ ರಾಮ್ ಚರಣ್, ಪುನೀತ್ ರಾಜ್ ಕುಮಾರ್ ನಿಧನ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ. ಕುಟುಂಬದ ಸದಸ್ಯರೊಬ್ಬರನ್ನು ಕಳೆದುಕೊಂಡಷ್ಟು ದು:ಖ ಎಲ್ಲರನ್ನೂ ಕಾಡುತ್ತಿದೆ. ನನ್ನ ಸಹೋದರನನ್ನೇ ಕಳೆದುಕೊಂಡಷ್ಟು ನೋವಾಗುತ್ತಿದೆ. ಇದನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಏನು ಮಾತನಾಡಬೇಕು ತಿಳಿಯುತ್ತಿಲ್ಲ. ಮಾನವೀಯತೆ ಮೌಲ್ಯಗಳನ್ನು ಪುನೀತ್ ರಿಂದ ನಾವೆಲ್ಲರೂ ಕಲಿಯಬೇಕು. ಪುನೀತ್ ಕುಟುಂಬಕ್ಕೆ, ಅಪಾರ ಅಭಿಮಾನಿಗಳಿಗೆ ಈ ದು:ಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಭಾವುಕರಾದರು.

ಸೋಲು ಗೆಲುವನ್ನು ಸಮವಾಗಿ ಸ್ವೀಕರಿಸುವ ದೃಷ್ಟಿಕೋನ ನಮ್ಮದು ಎಂದ ಸಿ.ಎಂ

Home add -Advt

Related Articles

Back to top button