Kannada NewsKarnataka NewsPolitics

*ತುರ್ತು ಸಂದರ್ಭ, ರೌಡಿಗಳ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್ ಮಾಡಿದ ಸಿಎಂ ಡಿಕೆಶಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ರೌಡಿಗಳ ಹಾವಳಿ ನಿಯಂತ್ರಿಸಲು ಐಪಿಎಸ್ ಅಧಿಕಾರಿಯ ನೇತೃತ್ವದಲ್ಲಿ ಪ್ರತ್ಯೇಕ ರೌಡಿ ಸ್ಕಾಡ್ ರಚಿಸಲು ಸರ್ಕಾರ ಮುಂದಾಗಿದೆ. 

ಈ ಮೂಲಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಿಎಂ ಡಿ.ಕೆ. ಶಿವಕುಮಾ‌ರ್  ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ. 

ಸ್ಥಳೀಯ ಪೊಲೀಸರ ಪ್ರಭಾವದಿಂದ ತಂಡವನ್ನು ದೂರವಿಟ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ವ್ಯವಸ್ಥೆ ಕಲ್ಪಿಸಲಾಗುತ್ತದೆ.

ಇನ್ನು ಎತ್ತರದ ಕಟ್ಟಡಗಳಲ್ಲಿ ಉಂಟಾಗಬಹುದಾದ ತುರ್ತು ಪರಿಸ್ಥಿತಿ ಎದುರಿಸಲು ಆಯ್ದ ಪೊಲೀಸ್‌ ಸಿಬ್ಬಂದಿಗೆ ಎನ್‌ಎಸ್‌ಜಿ ತರಬೇತಿ ನೀಡಲಾಗುತ್ತಿದೆ. ಇಂತಹ ಅಪಾಯಕಾರಿ ಕರ್ತವ್ಯ ನಿರ್ವಹಿಸುವವರಿಗೆ ಶೇ.50ರಷ್ಟು ಹೆಚ್ಚುವರಿ ಮೂಲ ವೇತನ ನೀಡುವ ಪ್ರಸ್ತಾವನೆಗೂ ಸರ್ಕಾರ ಒಪ್ಪಿಗೆ ಸೂಚಿಸಿದೆ.

ಭಯೋತ್ಪಾದಕ ದಾಳಿ ಸೇರಿದಂತೆ ಯಾವುದೇ ಸಂಕಷ್ಟದ ಸಂದರ್ಭದಲ್ಲಿ ನಾಗರಿಕರ ಸುರಕ್ಷತೆ ಖಚಿತಪಡಿಸುವುದು ಸರ್ಕಾರದ ಪ್ರಮುಖ ಹೊಣೆ ಎಂದು ಸಿಎಂ ಹೇಳಿದ್ದಾರೆ. 

ಕಟ್ಟಡಗಳಲ್ಲಿ ಅಗ್ನಿಶಾಮಕ ವ್ಯವಸ್ಥೆ ಹಾಗೂ ತುರ್ತು ನಿರ್ಗಮನ ಸೌಲಭ್ಯ ಪರಿಶೀಲಿಸಲು ಡಿಜಿಪಿ ಮತ್ತು ಪೊಲೀಸ್‌ ಆಯುಕ್ತರಿಗೆ ಸೂಚಿಸಲಾಗಿದೆ. 

ತುರ್ತು ಸಂದರ್ಭಗಳಲ್ಲಿ ಹೆಲಿಕಾಪ್ಟರ್ ನೆರವು ದೊರೆಯುವಂತೆ ಸೇನೆ ಮತ್ತು ವಾಯುಪಡೆಯೊಂದಿಗೆ ಒಪ್ಪಂದಕ್ಕೂ ಕ್ರಮ ಕೈಗೊಳ್ಳಲಾಗುತ್ತದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button