Belagavi NewsBelgaum NewsKannada NewsKarnataka NewsNational
*ಮುಂಗಾರು ಅಧಿವೇಶನದ ದಿನಾಂಕ ಘೋಷಿಸಿದ ಸಿಎಂ ಡಿಕೆಶಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನವು ಆಗಸ್ಟ್ 6ರಿಂದ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ತಿಳಿಸಿದರು.
ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿ, ದಿನಾಂಕ ಘೋಷಣೆ ಮಾಡಿದರು. ಸಚಿವ ಸಂಪುಟ ಸಭೆ ಯಾವಾಗ, ದೆಹಲಿಗೆ ಹೋಗುವುದು ಯಾವಾಗ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ, “ಆಗಸ್ಟ್ 6ರಿಂದ ಅಧಿವೇಶನ ಕರೆಯಲು ತೀರ್ಮಾನಿಸಲಾಗಿದೆ. ನಾನು ಒಂದು ದಿನ ಕೆಲಸದ ಮೇಲೆ ದೆಹಲಿಗೆ ಹೋಗಿ ಬರುತ್ತೇನೆ. ನಮ್ಮ ನಾಯಕರು ಮೂರ್ನಾಲ್ಕು ದಿನಗಳಲ್ಲಿ ದಿನಾಂಕ ನಿಗದಿ ಮಾಡುತ್ತಾರೆ. ನಂತರ ನಾನು ದೆಹಲಿಗೆ ಹೋಗುವೆ” ಎಂದು ಮಾಹಿತಿ ನೀಡಿದರು.




