*15 ಜನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿಕೆ ಶಿವಕುಮಾರ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ ಆಗಸ್ಟ್ 3ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆಯಾಗಿದೆ.
ನಾಳೆಯಿಂದ ಆಗಸ್ಟ್ 27ರವರೆಗೆ ವಿಧಾನಮಂಡಲ ಮುಂಗಾರು ಅಧಿವೇಶನ ನಿಗದಿಯಾಗಿದ್ದರೂ ನೂತನ ಸಚಿವರಿಗೆ ಖಾತೆ ಹಂಚಿಕೆ ನಡೆಯದಿರುವುದು ವಿಪಕ್ಷಗಳ ತೀವ್ರ ಟೀಕೆಗೆ ಗುರಿಯಾಗಿತ್ತು. ಈ ನಡುವೆ ಅಧಿವೇಶನ ಆರಂಭದ ಮುನ್ನಾ ದಿನವೇ ನೂತನ ಸಚಿವರಿಗೆ ಇಲಾಖಾವಾರು ಜವಾಬ್ದಾರಿ ಹಂಚಿಕೆ ನಡೆದಿದೆ.
ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಪಕ್ಷದಲ್ಲಿ ಭಾರಿ ಅಸಮಾಧಾನ ಭುಗಿಲೆದ್ದಿದ್ದ ಹಿನ್ನೆಲೆ ಕಾಂಗ್ರೆಸ್ ಹೈಕಮಾಂಡ್, ಅಳೆದು ತೂಗಿ ನೂತನ ಸಚಿವರಿಗೆ ಜವಾಬ್ದಾರಿ ನೀಡಿದೆ.
ಯಾರಿಗೆ ಯಾವ್ ಖಾತೆ
ಎನ್.ಚಲುವರಾಯಸ್ವಾಮಿ-ಕೃಷಿ ಇಲಾಖೆ
ರಿಜ್ವಾನ್ ಅರ್ಷದ್-ಆಹಾರ & ನಾಗರಿಕ ಸರಬರಾಜು ವ್ಯವಹಾರ
ಕೆ.ಹೆಚ್.ಮುನಿಯಪ್ಪ-ಸಮಾಜ ಕಲ್ಯಾಣ ಇಲಾಖೆ
ಸಂತೋಷ್ ಲಾಡ್-ಕಾರ್ಮಿಕ ಇಲಾಖೆ
ಕೆ.ಎಸ್.ಬಸವಂತಪ್ಪ- ಮೀನುಗಾರಿಕೆ, ಬಂದರು ಮತ್ತು ಒಳನಾಡು
ಮಧು ಬಂಗಾರಪ್ಪ – ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ
ಬಸವರಾಜ ರಾಯರೆಡ್ಡಿ- ಉನ್ನತ ಶಿಕ್ಷಣ ಇಲಾಖೆ
ಜಮೀರ್ ಅಹ್ಮದ್ ಖಾನ್-ವಸತಿ ಇಲಾಖೆ
ಲಕ್ಷ್ಮಣ ಸವದಿ-ಸಹಕಾರ ಇಲಾಖೆ
ಡಾ.ಅಜಯ್ ಸಿಂಗ್-ಅರಣ್ಯ ಇಲಾಖೆ
ಎಸ್.ಎಸ್.ಮಲ್ಲಿಕಾರ್ಜುನ-ಗಣಿ ಮತ್ತು ಭೂವಿಜ್ಞಾನ ಇಲಾಖೆ
ಹೆಚ್.ಸಿ.ಬಾಲಕೃಷ್ಣ-ಸಣ್ಣ ನೀರಾವರಿ ಇಲಾಖೆ
ಪುಟ್ಟರಂಗ ಶೆಟ್ಟಿ-ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ
ಶಿವಲಿಂಗೇಗೌಡ – ಅಬಕಾರಿ
ಪ್ರಮಾಣವಚನ ಸ್ವೀಕರಿಸಿದ 19 ಮಂದಿ ಪೈಕಿ 15 ಮಂದಿಗೆ ಮಾತ್ರ ಈ ಗ ಖಾತೆ ಹಂಚಿಕೆ ಮಾಡಲಾಗಿದೆ. ಸಚಿವರಾದ ನಾಗೇಂದ್ರ , ವಿಜಯಾನಂದ ಕಾಶಪ್ಪನವರ್, ನರೇಂದ್ರ ಸ್ವಾಮಿ, ಟಿ ರಘುಮೂರ್ತಿ ಇಲ್ಲಿಯವರೆಗೆ ಖಾತೆ ಫೈನಲ್ ಆಗಿಲ್ಲ. ಈ ಸಚಿವರಿಗೆ ಯಾವ ಖಾತೆ ನೀಡಬೇಕು ಎನ್ನುವುದರ ಬಗ್ಗೆ ಹೈಕಮಾಂಡ್ ಜೊತೆ ಡಿಕೆಶಿ ಚರ್ಚೆ ಮಾಡುತ್ತಿದ್ದಾರೆ. ಎಲ್ಲವೂ ಅಂತಿಮವಾದ ಬಳಿಕ ಸಿಎಂ ಸಚಿವರ ಪಟ್ಟಿಯನ್ನು ಲೋಕಭವನಕ್ಕೆ ಕಳುಹಿಸಲಿದ್ದಾರೆ.


