Kannada NewsKarnataka NewsPolitics

*ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ನಿಧನಕ್ಕೆ ಸಿಎಂ ಡಿ.ಕೆ ಶಿವಕುಮಾರ್ ಸಂತಾಪ*

ಪ್ರಗತಿವಾಹಿನಿ ಸುದ್ದಿ: ಎಐಸಿಸಿ ಕಾರ್ಯದರ್ಶಿಗಳು ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಅವರ ನಿಧನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.

“ಸೂರಜ್ ಹೆಗ್ಡೆ ಅವರ ಅಗಲಿಕೆ ಸುದ್ದಿ ಕೇಳಿ ನನ್ನ ಮನಸ್ಸಿಗೆ ಆಘಾತವಾಗಿದೆ. ಚಿಕ್ಕ ವಯಸ್ಸಿಗೆ ಅವರು ನಮ್ಮನ್ನು ಅಗಲಿದ್ದಾರೆ ಎಂಬುದನ್ನು ನಂಬಲೇ ಆಗುತ್ತಿಲ್ಲ.

Home add -Advt

ಸೂರಜ್ ಅವರು ಎಐಸಿಸಿ ಕಾರ್ಯದರ್ಶಿಯಾಗಿ ತಮಿಳುನಾಡು ಹಾಗೂ ಪುದುಚೆರಿ ರಾಜ್ಯದ ಉಸ್ತುವಾರಿಯಾಗಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಅವರ ಅಗಲಿಕೆ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ.

ಸೂರಜ್ ಹೆಗ್ಡೆ ಅವರು ತಮ್ಮ ತಾತ ದೇವರಾಜ ಅರಸು ಅವರಂತೆ ಹಿಂದುಳಿದ ವರ್ಗಗಳು, ಕಾರ್ಮಿಕರ ಹಕ್ಕು, ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸುತ್ತಿದ್ದರು. ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿಗಳಾಗಿ ಪಕ್ಷದ ಸಂಘಟನೆ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದರು. ಈಗ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರು.

ಸೂರಜ್ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Related Articles

Back to top button