
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಧ್ಯಾಹ್ನ ೩ ಗಂಟೆಗೆ ರಾಜ್ಯದ ಕೋವಿಡ್ ಸ್ಥಿತಿಗತಿಗೆ ಸಂಬಂಧಪಟ್ಟಂತೆ ಹಿರಿಯ ಅಧಿಕಾರಿಗಳ ಮತ್ತು ತಾಂತ್ರಿಕ ಸಲಹಾ ಸಮಿತಿಯ ಸದಸ್ಯರ ವರ್ಚುವಲ್ ಸಭೆ ಕರೆದಿದ್ದಾರೆ.
ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಅವರು ಅಲ್ಲಿಂದಲೇ ಸಭೆ ನಡೆಸಲಿದ್ದಾರೆ.
ನಿನ್ನೆ ಬೊಮ್ಮಾಯಿ ಅವರಿಗೆ ಕೊರೋನಾ ಸೋಂಕು ತಗುಲಿತ್ತು. ಸೌಮ್ಯ ಲಕ್ಷಣಗಳಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುವುದಾಗಿ ಟ್ವೀಟ್ ಮಾಡಿದ್ದರು. ಆದರೆ ಇದೀಗ ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಗಂಭೀರವಾಗುತ್ತಿರುವ ಹಿನ್ನೆಲೆಯಲ್ಲಿ ಅವರು ಹಿರಿಯ ಅಧಿಕಾರಿಗಳ ಮತ್ತು ತಾಂತ್ರಿಕ ಸಲಹಾ ಸಮಿತಿಯ ಸದಸ್ಯರ ವರ್ಚುವಲ್ ಸಭೆ ನಡೆಸಲಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನಾ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ