
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನಾಯಕತ್ವ ಬದಲಾವಣೆ ನಿಟ್ಟಿನಲ್ಲಿ ಯತ್ನ ನಡೆಸುತ್ತಿದ್ದ ವಿರೋಧಿ ಬಣಕ್ಕೆ ಸಿಎಂ ಬಿಎಸ್ ವೈ ಮತ್ತೊಮ್ಮೆ ಖಡಕ್ ಸಂದೇಶ ರವಾನಿಸಿದ್ದು, ಸಿಎಂ ಸ್ಥಾನಕ್ಕೆ ರಾಜೀನಾಮೆ ವಿಚಾರ ಶುದ್ಧ ಸುಳ್ಳು ಎಂದು ಹೇಳಿದ್ದಾರೆ.
ದೆಹಲಿಯ ಮೋತಿಲಾಲ್ ನೆಹರು ರಸ್ತೆಯಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ನಿವಾಸಕ್ಕೆ ತೆರಳಿದ ಸಿಎಂ, ನಡ್ಡಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗಲ್ಲ. ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಹೈಕಮಾಂಡ್ ನನಗೆ ರಾಜೀನಾಮೆ ನೀಡುವಂತೆ ಸೂಚಿಸಿಲ್ಲ ಎಂದು ಹೇಳಿದರು.
ನಾಯಕತ್ವ ಬದಲಾವಣೆಯ ಯಾವುದೇ ಗೊಂದಲಗಳು ಬೇಡ. ರಾಜೀನಾಮೆ ಎಂಬುದು ಸುಳ್ಳು ಸುದ್ದಿ. ಆಗಸ್ಟ್ ಮೊದಲ ವಾರ ಮತ್ತೊಮ್ಮೆ ದೆಹಲಿಗೆ ಭೇಟಿ ನೀಡುತ್ತೇನೆ ಎಂದು ಸ್ಪಷ್ಟ ಪಡಿಸಿದರು.
ಎಸ್.ಎಸ್.ಎಲ್.ಸಿ.ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ