Latest

ಸಿಎಂ ಸಭೆ, ಪತ್ರಿಕಾಗೋಷ್ಠಿಯತ್ತ ಎಲ್ಲರ ಚಿತ್ತ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿನ ಕೊರೋನಾ ಪರಿಸ್ಥಿತಿ ಮತ್ತು ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಹತ್ವದ ಸಭೆ ನಡೆಸುತ್ತಿದ್ದು, ನಂತರ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವಿವಿಧ ಜಿಲ್ಲಾಧಿಕಾರಿಗಳೊಂದಿಗೆ ಸಂವಾದ ನಡೆಸಿದ ನಂತರ ಅನೇಕ ಬೆಳವಣಿಗೆಗಳು ನಡೆದಿವೆ. ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ. ಸಧ್ಯ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮತ್ತು ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಬೆಂಗಳೂರಿನಲ್ಲಿ ಇಳಿಮುಖವಾಗಿದೆ.

ಇದೇ 24ರಂದು ಸಧ್ಯ ಜಾರಿಯಲ್ಲಿರುವ ಲಾಕ್ ಡೌನ್ ಮುಕ್ತಾಯವಾಗಲಿದ್ದು ಅದನ್ನು ಮತ್ತಷ್ಟ ದಿನ ಮುಂದುವರಿಸಬೇಕೇ? ಮುಂದುವರಿಸಬೇಕೆಂದರೆ ಎಷ್ಟು ದಿನ? ಏನೇನು ಬದಲಾವಣೆ ಮಾಡಬೇಕು? ಇನ್ನಷ್ಟು ಕಠಿಣಗೊಳಿಸಬೇಕೆ? ಎನ್ನುವ ಎಲ್ಲ ವಿಚಾರಗಳನ್ನು ಯಡಿಯೂರಪ್ಪ ಅಧಿಕಾರಿಗಳ ಜೊತೆ ಚರ್ಚಿಸಲಿದ್ದಾರೆ.

ಕನಿಷ್ಠ ಈ ತಿಂಗಳ ಅಂತ್ಯದವರೆಗಾದರೂ ಲಾಕ್ ಡೌನ್ ವಿಸ್ತರಿಸುವುದು ರಾಜ್ಯದ ಹಿತದೃಷ್ಟಿಯಿಂದ ಉತ್ತಮ ಎನ್ನುವ ಅಭಿಪ್ರಾಯ ತಜ್ಞರಿಂದ ಬಂದಿದೆ. ಈ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಇದಾದ ನಂತರ ಅವರು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಲಾಕ್ ಡೌನ್ ಕುರಿತು ಇಂದೇ ನಿರ್ಧಾರ ಪ್ರಕಟಿಸಲಿದ್ದಾರೆಯೇ ಅಥವಾ ಇನ್ನೂ 2 -3 ದಿನ ಕಾದು ನಂತರ ನಿರ್ಧಾರ ತೆಗೆದುಕೊಳ್ಳಲಾಗುತ್ತದೆಯೋ ಕಾದು ನೋಡಬೇಕಿದೆ.

ಜೊತೆಗೆ ಲಾಕ್ ಡೌನ್ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆಯೂ ಇದೆ.

ಬೆಳಗಾವಿಯಲ್ಲಿ 3 ದಿನ ಸಂಪೂರ್ಣ ಲಾಕ್ ಡೌನ್; ಹೊಸ ಆದೇಶ

 

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button