
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಸಿಎಂ ಡಿ ಕೆ ಶಿವಕುಮಾರ್ ಅವರು ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ರೈತ ಮುಖಂಡರು ಹಾಗೂ ಸಕ್ಕರೆ ಕಾರ್ಖಾನೆಗಳ ಮಾಲೀಕರ ಪ್ರತಿನಿಧಿಗಳೊಂದಿಗೆ ಸೋಮವಾರ ರಾತ್ರಿ ಜಂಟಿ ಸಭೆ ನಡೆಸಿದರು.
ಸಚಿವ ಸತೀಶ್ ಜಾರಕಿಹೊಳಿ, ಲಕ್ಷ್ಮಣ್ ಸವದಿ, ಸಂತೋಷ್ ಲಾಡ್, ಯಶವಂತರಾಯ ಗೌಡ ಪಾಟೀಲ್, ಶಾಸಕ ಎನ್ ಎಚ್ ಕೋನರೆಡ್ಡಿ, ರೈತ ಮುಖಂಡರಾದ ಬಡಗಲಪುರ ನಾಗೇಂದ್ರ, ಚೂನಪ್ಪ ಪೂಜಾರಿ, ಕುರುಬೂರು ಶಾಂತಕುಮಾರ್, ಚುಕ್ಕಿ ನಂಜುಂಡಸ್ವಾಮಿ, ಸಕ್ಕರೆ ಕಾರ್ಖಾನೆಗಳ ಮಾಲೀಕರಾದ ಸಂಗಮೇಶ್ವರ ನಿರಾಣಿ, ಯೋಗೀಶ್ ಪಾಟೀಲ್, ಚನ್ನರಾಜ್ ಹಟ್ಟಿಹೊಳಿ, ವಿವೇಕ್ ಹೆಬ್ಬಾರ್, ಸಿಎಂ ಆರ್ಥಿಕ ಸಲಹೆಗಾರ ಎಲ್ ಅತೀಕ್, ಅಪರ ಮುಖ್ಯಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




