Kannada NewsKarnataka NewsLatestPolitics

*ಆ. 7 ರಂದು ಆರು ಜಿಲ್ಲೆಗಳ ಸಚಿವರು, ಶಾಸಕರೊಂದಿಗೆ ಸಿಎಂ ಸಭೆ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 7 ರಂದು ಸೋಮವಾರ ವಿವಿಧ ಜಿಲ್ಲೆಗಳ ಉಸ್ತುವಾರಿ ಸಚಿವರು, ಸಚಿವರು ಹಾಗೂ ಶಾಸಕರೊಂದಿಗೆ ಸಭೆ ನಡೆಸಿ ಚರ್ಚಿಸಲಿದ್ದಾರೆ.

Home add -Advt

ಅಂದು ತುಮಕೂರು, ಯಾದಗಿರಿ, ಚಿತ್ರದುರ್ಗ, ಬಾಗಲಕೋಟೆ, ಬಳ್ಳಾರಿ ಹಾಗೂ ಧಾರವಾಡ ಜಿಲ್ಲೆಗಳ ಉಸ್ತುವಾರಿ ಸಚಿವರು, ಸಚಿವರು ಹಾಗೂ ಶಾಸಕರೊಂದಿಗೆ ಸಭೆ ನಡೆಸಿ ವಿವಿಧ  ವಿಷಯಗಳ ಕುರಿತು ಚರ್ಚಿಸಲಿದ್ದಾರೆ.

ಸಭೆಯು ಆಗಸ್ಟ್ 7 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2.00 ರ ವರೆಗೆ ಹಾಗೂ ಸಂಜೆ 4.00 ಗಂಟೆಯಿಂದ 7 ಗಂಟೆಯ ವರೆಗೆ ನಡೆಯಲಿದೆ.

Related Articles

Back to top button