Kannada NewsKarnataka NewsPolitics

*ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ*

ಪ್ರಗತಿವಾಹಿನಿ ಸುದ್ದಿ : ಗುರುವಾರ ತಡರಾತ್ರಿ ಕೇಂದ್ರ ಗೃಹಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದಾರೆ. ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷ ನಾಯಕ ಆ‌ರ್. ಅಶೋಕ್ ಹಾಗೂ ವಿಧಾನಪರಿಷತ್‌ ಸದಸ್ಯ ಸಿ.ಟಿ. ರವಿ ಸೇರಿದಂತೆ ಹಲವು ನಾಯಕರು ಅಮಿತ್ ಶಾ ಅವರನ್ನು ಸ್ವಾಗತಿಸಿದರು.

ಇಂದು ನೆಲಮಂಗಲದ ಬಳಿಯಿರುವ ಬಿಜಿಎಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ. ಇಂದೇ ಮಧ್ಯಾಹ್ನ ಅಮಿತ್ ಶಾ ನವದೆಹಲಿಗೆ ತೆರಳಲಿದ್ದಾರೆ.

ಅಮಿತ್ ಶಾ ದೆಹಲಿಗೆ ತೆರಳುವ ಮುನ್ನ ಬಿಜೆಪಿ ಪಕ್ಷ ಸಂಘಟನೆಯ ಬಗ್ಗೆ ಚರ್ಚೆ ಮಾಡಲಿದ್ದಾರೆ ಎನ್ನಲಾಗಿದೆ. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button