Latest

ಮುಖ್ಯಮಂತ್ರಿಗಳ ಗೃಹ ಕಚೇರಿಗೂ ಕೊರೊನಾ ಭೀತಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾಗೂ ಕೊರೊನಾ ಸೋಂಕಿನ ಭೀತಿ ಎದುರಾಗಿದೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೋಲಿಸ್ ಕಾನ್ ಸ್ಟೇಬಲ್ ಪತಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಕಳೆದ ಹಲವು ದಿನಗಳಿಂದ ಕೃಷ್ಣಾದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಹೀಗಾಗಿ ಗೃಹ ಕಚೇರಿ ಸಿಬ್ಬಂದಿಗೂ ಸೋಂಕಿನ ಭೀತಿ ಎದುರಾಗಿದ್ದು, ಕಚೇರಿಯನ್ನ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸದ್ಯ ಮುಖ್ಯಮಂತ್ರಿಗಳ ಎಲ್ಲ ಕಾರ್ಯಕ್ರಮಗಳನ್ನು ವಿಧಾನಸೌಧಕ್ಕೆ ಶಿಫ್ಟ್ ಮಾಡಲಾಗಿದೆ.

Home add -Advt

ಮಹಿಳಾ ಪೊಲೀಸ್ ಕಾನ್ ಸ್ಟೇಬಲ್ ಪತಿಗೆ ಕೊರೊನಾ ಪಾಸಿಟಿವ್ ಕಂಡುಬಂದ ಬೆನ್ನಲ್ಲೇ ಮಹಿಳಾ ಅಧಿಕಾರಿಗೂ ಕೊವಿಡ್ ಟೆಸ್ಟ್ ಮಾಡಲಾಗಿದೆ. ಅದರ ವರದಿ ಇಂದು ಸಂಜೆ ಬರಲಿದೆ.

Related Articles

Back to top button