Belagavi NewsBelgaum NewsKannada NewsKarnataka NewsPolitics

*ಬೆಳಗಾವಿಗೆ ದಿಢೀರ್ ಪ್ರವಾಸ ಕೈಗೊಂಡ ಸಿಎಂ ಡಿ.ಕೆ.ಶಿವಕುಮಾರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಪಾದಯಾತ್ರೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಸಿಎಂ ಡಿ.ಕೆ.ಶಿವಕುಮಾರ ಅವರು ಶನಿವಾರ ಬೆಳಗಾವಿಗೆ ಆಗಮಿಸಲಿದ್ದಾರೆ. 

ಈ ವೇಳೆ ಹೋರಾಟ ನಿರತ ರೈತರನ್ನು ಭೇಟಿಯಾಗಿ ಅವರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು ಶುಕ್ರವಾರ ಬೆಳಗಾವಿಯ ಸುವರ್ಣ ವಿಧಾನಸೌಧದ ಬಳಿಯ ಕಲ್ಯಾಣ ಮಂಟಪದಿಂದ ಪಾದಯಾತ್ರೆ ಆರಂಭಿಸಿದ್ದರು. ಸದ್ಯ ಪಾದಯಾತ್ರೆ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ತಲುಪಿದೆ.

ರೈತರ ಪಾದಯಾತ್ರೆ ಕಿತ್ತೂರು ತಲುಪುವ ಮುನ್ನವೇ ಡಿ.ಕೆ.ಶಿವಕುಮಾರ ಅವರು ರೈತರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಕಬ್ಬಿಗೆ ಸೂಕ್ತ ಬೆಲೆ ನಿಗದಿ ಸೇರಿದಂತೆ ರೈತರ ಬೇಡಿಕೆಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ಡಿ.ಕೆ.ಶಿವಕುಮಾರ ಅವರು ವಿಶೇಷ ವಿಮಾನದ ಮೂಲಕ ಶನಿವಾರ ಮಧ್ಯಾಹ್ನ ಬೆಳಗಾವಿಗೆ ಆಗಮಿಸಲಿದ್ದು, ರೈತರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಇಂದೆ ರಾತ್ರಿ ವಾಪಸ್ ತೆರಳಲಿದ್ದಾರೆ. ಬೆಳಗಾವಿ ಪ್ರವಾಸದ ಅಧಿಕೃತ ವೇಳಾಪಟ್ಟಿ ಪ್ರಕಟವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button