
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆಯ ಅತ್ಯಂತ ಪ್ರಮುಖ ಯೋಜನೆಯಾದ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಉದ್ಘಾಟನೆ ನೆರವೇರಿಸುವ ಮೂಲಕ ಸ್ಮಾರ್ಟ್ ಸಿಟಿ ಯೋಜನೆಯನ್ನು ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬೆಳಗಾವಿಯಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಯೋಜನೆಯ ಕೆಲಸಗಳನ್ನು ಪ್ರಶಂಸಿಸಿದರು.
ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ಒಳ್ಳೆಯ ಕೆಲಸ ಆಗಿದೆ. ಇನ್ನಷ್ಟು ಚುರುಕುಗೊಳಿಸಲು ಸೂಚನೆ ನೀಡಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಬೆಳಗಾವಿ ಸಾಮಾಜಿಕ, ಸಾಂಸ್ಕೃತಿಕವಾಗಿ ಆರ್ಥಿಕವಾಗಿ ರಾಜ್ಯದ ಪ್ರಮುಖ ನಗರವಾಗಿ ಬೆಳೆದಿದೆ. ಇಲ್ಲಿ ಸ್ಮಾರ್ಟ್ ಸಿಟಿಯಡಿ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಸ್ಥಾಪನೆ ಶ್ಲಾಘನೀಯ ಎಂದೂ ಅವರು ಹೇಳಿದರು.
ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಮೂಲಕ ಸಂಚಾರ ದಟ್ಟಣೆ ನಿರ್ವಹಣೆ ವಿನೂತನ ಪ್ರಯತ್ನವಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ಗುಣಮಟ್ಟದ ಕಾಮಗಾರಿ ಮುಂದುವರಿಸುವಂತೆ ಸೂಚನೆ ನೀಡಲಾಗಿದೆ ಎಂದೂ ಯಡಿಯೂರಪ್ಪ ತಿಳಿಸಿದರು.
ಕೇಂದ್ರ ಸರಕಾರದ ಸ್ಮಾರ್ಟ್ ಸಿಟಿ ಯೋಜನೆಯ ಅಡಿಯಲ್ಲಿ ಬೆಳಗಾವಿ ಮೊದಲ ಪಟ್ಟಿಯಲ್ಲೇ ಆಯ್ಕೆಯಾಗಿತ್ತು. ಆರಂಭಿಕವಾಗಿ ಕೆಲವು ವಿಘ್ನಗಳು ಎದುರಾಗಿ ವಿಳಂಬವಾಗಿದ್ದರೂ ಇತ್ತೀಚಿನ ದಿನಗಳಲ್ಲಿ ಸಮರೋಪಾದಿಯಲ್ಲಿ ಕೆಲಸಗಳು ನಡೆಯುತ್ತಿವೆ.
ಬರುವ ಡಿಸೆಂಬರ್ ಹೊತ್ತಿಗೆ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸುವ ಗುರಿ ಹೊಂದಿರುವ ಸ್ಮಾರ್ಟ್ ಸಿಟಿ ಸ್ಪೆಷಲ್ ಪರ್ಪಸ್ ವೆಹಿಕಲ್, ಅತ್ಯಂತ ವೇಗವಾಗಿ ಕೆಲಸಗಳನ್ನು ನಡೆಸುತ್ತಿದೆ. ಜೂನ್ ಹೊತ್ತಿಗೆ ರಾಷ್ಟ್ರಮಟ್ಟದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ Ranking ಪ್ರಕಟವಾಗಲಿದ್ದು, ಬೆಳಗಾವಿಗೆ ಉತ್ತಮ ಸ್ಥಾನದ ನಿರೀಕ್ಷೆ ಹೊಂದಲಾಗಿದೆ.
CM Inaugurates Smart City command and control Center
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ