Belagavi NewsBelgaum NewsKannada NewsKarnataka NewsLatest

ಯಾರೇ ಪುಂಡಾಟ ಮಾಡಿದ್ರೂ ಸುಮ್ಮನಿರಲ್ಲ: ಸಿ.ಎಂ

ಆದಿತ್ಯ ಠಾಕ್ರೆ ಹೇಳಿಕೆ ಬಾಲಿಶ: ಸಿ.ಎಂ.ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು ಎನ್ನು ಹೇಳಿಕೆ ಅತ್ಯಂತ ಬಾಲಿಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದರು.

ಆದಿತ್ಯ ಠಾಕರೆ ನೀಡಿದ ಹೇಳಿಕೆ ಬಗ್ಗೆ ಸುವರ್ಣಸೌಧದಲ್ಲಿ‌ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ನಮಗೆ ಮಹಾಜನ್ ವರದಿಯೇ ಅಂತಿಮ. ಮಹಾಜನ್ ವರದಿಯನ್ನು ಒಪ್ಪಿಕೊಂಡ ಮೇಲೆ ಮುಗಿಯಿತು. ಯಾರಾದ್ರೂ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದ ಸಿಎಂ ಈ ಕಾರಣಕ್ಕೇ ಇದೊಂದು ಬಾಲಿಶ ಹೇಳಿಕೆ ಎಂದರು.

Home add -Advt

MES ನವರು ಇದೇ ವಿಚಾರದಲ್ಲಿ ಪುಂಡಾಟಿಕೆ ಮಾಡಿದರೆ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆಯೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾರೇ ಪುಂಡಾಟಿಕೆ ಮಾಡಿದರೂ ಸುಮ್ಮನಿರಲ್ಲ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button