Kannada NewsKarnataka NewsLatest

*ಪ್ರಯಾಣಿಕರ ಗಮನಕ್ಕೆ; ಬಸ್ ಗಳಲ್ಲಿ ಮಾಸ್ಕ್ ಧರಿಸಲು ಸಚಿವ ರಾಮಲಿಂಗಾ ರೆಡ್ಡಿ ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹರಡುತ್ತಿದ್ದು, ಓರ್ವ ವ್ಯಕ್ತಿ ಬಲಿಯಾಗಿದ್ದಾರೆ ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಆರೋಗ್ಯದ ಬಗ್ಗೆ ಜಾಗೃತೆ ವಹಿಸುವಂತೆ ರಾಜ್ಯ ಸರ್ಕಾರ ಸಲಹೆ ನೀಡಿದೆ.

ಬೆಂಗಳೂರಿನಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಬಸ್ ಗಳಲ್ಲಿ ಪ್ರತಿಯೊಬ್ಬ ಪ್ರಯಾಣಿಕರು ಮಾಸ್ಕ್ ಧರಿಸಿ ಪ್ರಯಾಣಿಸಿ ಎಂದು ಸೂಚನೆ ನೀಡಿದ್ದಾರೆ.

Related Articles

ಸರ್ಕಾರದ ಆದೇಶದಂತೆ ನಾವು ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳುತ್ತೇವೆ, ಮುಜರಾಯಿ ಇಲಾಖೆ, ಸಾರಿಗೆ ನಿಗಮಗಳಲ್ಲಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಪ್ರಯಾಣಿಕರು ಆರೋಗ್ಯದ ದೃಷ್ಠಿಯಿಂದ ಮಾಸ್ಕ್ ಧರಿಸುವುದು ಸೂಕ್ತ ಎಂದರು.

ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿದೆ. ಕೇರಳದಿಂದ ಬರುವ ಹಾಗೂ ಹೋಗುವ ಬಸ್ ಗಳಿಗೆ ಸ್ಯಾನಿಟೈಸರ್ ಸಿಂಪಡ್ಡಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

Home add -Advt

Related Articles

Back to top button