*ಗುರುವಾರ ಬೆಳಗ್ಗೆ 9 ಗಂಟೆಗೆ ಸಿಎಂ ಸಿದ್ಧರಾಮಯ್ಯ ಉಪಹಾರ ಕೂಟ* *ನಾಳೆಯೇ ರಾಜಿನಾಮೆ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಗುರುವಾರ ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ನಿವಾಸದಲ್ಲಿ ಸಚಿವರ ಉಪಹಾರಕೂಟ ಏರ್ಪಡಿಸಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ದೆಹಲಿಯಿಂದ ಆಗಮಿಸಿ ನೇರವಾಗಿ ಉಪಹಾರಕೂಟದಲ್ಲಿ ಭಾಗಿಯಾಗಲಿದ್ದಾರೆ.
ಈಗಷ್ಟೆ ಡಿ.ಕೆ.ಶಿವಕುಮಾರ ಪ್ರವಾಸ ಪಟ್ಟಿ ಪ್ರಕಟವಾಗಿದ್ದು, ಗುರುವಾರ ಬೆಳಗ್ಗೆ 5.45ಕ್ಕೆ ನವದೆಹಲಿಯಿಂದ ಹೊರಟು, 8 ಗಂಟೆಗೆ ಬೆಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಅಲ್ಲಿಂದ ನೇರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏರ್ಪಡಿಸಿರುವ ಉಪಹಾರಕೂಟದಲ್ಲಿ ಭಾಗಿಯಾಗಲಿದ್ದಾರೆ ಎಂದು ಟಿಪಿಯಲ್ಲಿ ತಿಳಿಸಲಾಗಿದೆ.
ಉಪಹಾರಕೂಟದ ಬಳಿಕ ಸಿದ್ದರಾಮಯ್ಯ ರಾಜದ್ಯಪಾಲರನ್ನು ಭೇಟಿಯಾಗಿ ತಮ್ಮ ರಾಜಿನಾಮೆ ಸಲ್ಲಿಸುವ ಸಾಧ್ಯತೆ ಇದೆ. ಸಂಜೆ ಶಾಸಕಾಂಗ ಪಕ್ಷದ ಸಭೆ ನಡೆಸಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿ.ಕೆ.ಶಿವಕುಮಾರ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ.
ಇಧರಿಂದಾಗಿ ಕಳೆದ ಸುಮಾರು ಒಂದು ವರ್ಷದಿಂದ ನಡೆಯುತ್ತಿದ್ದ ನಾಯಕತ್ವ ಬದಲಾವಣೆ ಕುರಿತ ಗೊಂದಲಗಳು ಬಗೆಹರಿಯುವ ಸ್ಪಷ್ಟ ಸೂಚನೆ ಸಿಕ್ಕಿದಂತಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




