ಪ್ರಗತಿವಾಹಿನಿ ಸುದ್ದಿ: ಗೃಹ ಕಚೇರಿ ಕೃಷ್ಣಾದಲ್ಲಿ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ
ಈ ಸಭೆಗೆ ರಾಜ್ಯದ ಸರ್ವಪಕ್ಷಗಳ ಸದಸ್ಯರು, ಕೇಂದ್ರ ಸಚಿವರು, ಸಂಸತ್ ಸದಸ್ಯರು, ಕಾವೇರಿ ಜಲಾನಯನ ಪ್ರದೇಶದ ವಿಧಾನಸಭಾ ಮತ್ತು ವಿಧಾನ ಪರಿಷತ್ ಸದಸ್ಯರು ಹಾಜರಾಗಲು ಸಿಎಂ ಸಿದ್ದಾರಾಮಯ್ಯ ಕೋರಿದ್ದಾರೆ.
ನಾಳೆ ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಈ ಸಭೆಯಲ್ಲಿ ಕಾವೇರಿ ನೀರು ಹಂಚಿಕೆಯಲ್ಲಿ ಉದ್ಭವವಾಗಿರುವ ಸಮಸ್ಯೆಯನ್ನು ಪರಿಹರಿಸುವ ಸಂಬಂಧ ಅಗತ್ಯ ಸಲಹೆ ಕುರಿತು ಚರ್ಚ ನಡೆಯಬೇಕು ಎಂದು ಸಿಎಂ ತಿಳಿಸಿದ್ದಾರೆ.
ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಈ ಬಾರಿ ವಾಡಿಕೆ ಮಳೆ ಆಗುವುದೆಂಬ ಹವಾಮಾನ ಮುನ್ಸೂಚನೆ ಇದ್ದರೂ ಈ ವರೆಗೆ ಶೇ. 28 ರಷ್ಟು ಒಳಹರಿವಿನ ಕೊರತೆ ಇದೆ. ಇದನ್ನು CWRC ಸ್ಪಷ್ಟವಾಗಿ ನಮ್ಮ ನಿಲುವನ್ನು ಹೇಳಿದ್ದೆವು. ಜೊತೆಗೆ ಜುಲೈ ಅಂತ್ಯದ ವರೆಗೆ ಯಾವುದೇ ತೀರ್ಮಾನ ಮಾಡದಂತೆ ಮನವಿ ಮಾಡಿದ್ದೆವು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕದ ನೀರಿನ ವಿಚಾರದಲ್ಲಿ ಎಲ್ಲ ಪಕ್ಷದವರೂ ಒಟ್ಟಾಗಿದ್ದೇವೆ. ಆದ್ದರಿಂದ ಸರ್ವಪಕ್ಷ ಸಭೆ ನಡೆಸಲಾಗುವುದು. ವಿಪಕ್ಷಗಳ ನಾಯಕರನ್ನು ಮತ್ತು ರಾಜ್ಯದ ಸಂಸದರನ್ನು ಸಭೆಗೆ ಕರೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ