Kannada NewsKarnataka NewsPolitics

*ಅಂತಹ ಯಾವುದೇ ನೇಮಕಾತಿ ನಡೆದಿಲ್ಲ ಎಂದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಎಐಸಿಸಿಯ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಮಕಗೊಂಡಿದ್ದಾರೆ ಎಂಬುವುದು ಸತ್ಯಕ್ಕೆ ದೂರವಾದದ್ದು, ಅಂತಹ ಆಯ್ಕೆ ನಡೆದಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ ಸ್ಪಷ್ಟಪಡಿಸಿದೆ.

ಅಂತಹ ಯಾವುದೇ ನೇಮಕಾತಿಯೂ ಆಗಿಲ್ಲ. ಒಬಿಸಿ ಸಲಹಾ ಮಂಡಳಿಯ ಸದಸ್ಯರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಒಬ್ಬರಾಗಿದ್ದಾರೆ.‌ ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಡಾ.‌ ಅನಿಲ್ ಜೈಹಿಂದ್ ಅವರ ಅಧ್ಯಕ್ಷತೆಯಲ್ಲಿ ಜುಲೈ 15ರಂದು ಬೆಂಗಳೂರಿನಲ್ಲಿ ನಡೆಯಲಿದೆ.‌

ಸಭೆಯ ಆತಿಥ್ಯವನ್ನು ಮುಖ್ಯಮಂತ್ರಿಗಳು ವಹಿಸಿಕೊಂಡಿದ್ದಾರೆ. ಸಭೆ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನಡೆಯಲಿದೆ. ವಿವಿಧ ರಾಜ್ಯಗಳ ಪಕ್ಷದ ಮಾಜಿ ಮುಖ್ಯಮಂತ್ರಿಗಳು, ಹಾಲಿ ಮತ್ತು ಮಾಜಿ ಸಂಸದರು, ಶಾಸಕರು ಸೇರಿದಂತೆ 50 ಮಂದಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ನೇಮಕ ಮಾಡಲಾಗಿದೆ ಎಂದು ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ವಿಪಕ್ಷ ಬಿಜೆಪಿ ನಾಯಕರು ಇದು ಸಿಎಂ ಬದಲಾವಣೆ ನಿಟ್ಟಿನಲ್ಲಿ ನೀಡುತ್ತಿರುವ ಸಂದೇಶ ಎಂದು ಟಾಂಗ್ ನೀಡಿದ್ದರು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಮುಖ್ಯಮಂತ್ರಿಗಳ ಕಚೇರಿ ಸ್ಪಷ್ಟನೆ ನೀಡಿದೆ.

Home add -Advt

Related Articles

Back to top button