Kannada NewsKarnataka NewsLatest

ನಾಳೆ ಎಮರ್ಜನ್ಸಿ ಮೀಟಿಂಗ್ ಕರೆದ ಸಿಎಂ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಡುವಂತೆ ಕಾವೇರಿ ನದಿ ನೀರು ಪ್ರಾಧಿಕಾರ ಸೂಚಿಸಿರುವ ಹಿನ್ನೆಲೆಯಲ್ಲಿ ನಾಳೆ (ಬುಧವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ  ಸಮ್ಮೇಳನ ಸಭಾಂಗಣದಲ್ಲಿ  12:30 ಕ್ಕೆ ವಿಶೇಷ ತುರ್ತು ಸಭೆ ನಡೆಯಲಿದೆ. 

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮತ್ತು ಕಾವೇರಿ ಜಲಾನಯನ ಪ್ರದೇಶದ ವ್ಯಾಪ್ತಿಯ ಸಚಿವರುಗಳು, ಎಲ್ಲಾ ಪಕ್ಷಗಳ ಮಾಜಿ ಮುಖ್ಯಮಂತ್ರಿಗಳು, ರಾಜ್ಯ ಸಚಿವ ಸಂಪುಟದ ಹಿರಿಯ ಸಚಿವರು, ಲೋಕಸಭೆ ಮತ್ತು ರಾಜ್ಯ ಸಭಾ ಸದಸ್ಯರುಗಳು ತುರ್ತು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ರಾತ್ರಿ ಸಭೆ

ತಮಿಳುನಾಡಿಗೆ ಮುಂದಿನ 15:ದಿನಗಳ ಕಾಲ ನಿತ್ಯ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲು ಕರ್ನಾಟಕಕ್ಕೆ ಸೂಚಿಸುವಂತೆ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರವು (CWRC) ಶಿಫಾರಸ್ಸು ಮಾಡಿರುವ ಹಿನ್ನೆಲೆಯಲ್ಲಿ ಮುಂದೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ವಿಧಾನಸೌಧದ ಸಿಎಂ ಕಚೇರಿಯಲ್ಲಿ ಮಂಗಳವಾರ ರಾತ್ರಿ ತುರ್ತು ಸಭೆ ನಡೆಸಲಾಯಿತು.

ಸಚಿವರಾದ ಚಲುವರಾಯಸ್ವಾಮಿ, ಎಚ್.ಸಿ. ಮಹದೇವಪ್ಪ, ನಾಗೇಂದ್ರ , ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ, ರಾಜಕೀಯ ಸಲಹೆಗಾರ ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಎಸಿಎಸ್ ರಜನೀಶ್ ಗೋಯಲ್, ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತಿತರರು ಭಾಗವಹಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button