
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವಿಜಯಪುರ ಬಸ್ ನಿಲ್ದಾಣದ ಮುಂಬಾಗದ ವೃತ್ತದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಅವರ ಮೂರ್ತಿಯನ್ನು ಅನಾವರಣಗೊಳಿಸಿದರು. ಬಳಿಕ ಬೂತನಾಳು ಗ್ರಾಮದಲ್ಲಿ “ಸೈಕ್ಲಿಂಗ್ ವೇಲೋಡ್ರಮ್ ಉದ್ಘಾಟನೆ” ನೆರವೇರಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಎಂ.ಬಿ.ಪಾಟೀಲ್, ಲಕ್ಷ್ಮೀ ಹೆಬ್ಬಾಳ್ಕರ್, ಡಾ.ಹೆಚ್.ಸಿ.ಮಹದೇವಪ್ಪ, ಶಿವಾನಂದ ಪಾಟೀಲ್, ಡಾ.ಸುಧಾಕರ್, ಬೈರತಿ ಸುರೇಶ್, ಮಾಜಿ ಸಚಿವ ಬಸವನಗೌಡ ಪಾಟೀಲ್ ಯತ್ನಾಳ್, ಶ್ರೀ ವಚನಾನಂದ ಸ್ವಾಮೀಜಿ ಮಾತೋಶ್ರೀ ಯೋಗೇಶ್ವರಿ ಮಾತಾಜಿ, ಶ್ರೀ ಅಭಿನವ ಸಂಗನ ಬಸವ ಶಿವಾಚಾರ್ಯ ಸ್ವಾಮೀಜಿ ಸೇರಿ ಹಲವು ಪ್ರಮುಖರು, ಮುಖಂಡರುಗಳು, ಜನ ಪ್ರತಿನಿಧಿಗಳು ಉಪಸ್ಥಿತರಿದ್ದರು.



