ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿನಿಂದ ಮೂರು ದಿನಗಳ ಕಾಲ ರಾಷ್ಟ್ರ ರಾಜಧಾನಿ ನವದೆಹಲಿಗೆ ಭೇಟಿ ನೀಡುತ್ತಿದ್ದು, ಕರ್ನಾಟಕದಿಂದ ಚುನಾಯಿತ ಸಂಸದರು ಮತ್ತು ಕೇಂದ್ರ ಸಚಿವರು ಸೇರಿದಂತೆ ವಿವಿಧ ನಾಯಕರ ಭೇಟಿ ಮಾಡಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ಯೋಜನೆಗಳು, ಅನುದಾನ ಕುರಿತು ಮಾತುಕತೆ ನಡೆಸಿಲಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಿಂದ ದೆಹಲಿಗೆ ತೆರಳಿರುವ ಸಿಎಂ, ಸಂಜೆ 6 ಗಂಟೆಗೆ ನಡೆಯಲಿರುವ ಸಂಸದರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬಾಕಿ ಅನುದಾದನ ವಿಚಾರವಾಗಿ ಸಂಸದರ ಜೊತೆ ಚರ್ಚಿಸಿ ಪ್ರಧಾನಿ ಮೋದಿ ಮೇಲೆ ಒತ್ತಡ ಹೇರುವ ಬಗ್ಗೆ ಚರ್ಚಿಸಲಿದ್ದಾರೆ.
ಸಭೆಯಲ್ಲಿ ರಾಜ್ಯದ ನೀರಾವರಿ ಯೋಜನೆಯಾದ ಮಹಾದಾಯಿ, ಕೃಷ್ಣಾ, ಭದ್ರಾ ಮೇಲ್ದಂಡೆ ಯೋಜನೆ, ಮೇಕೆದಾಟು ಯೋಜನೆ ಮತ್ತು ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಗಳಿವೆ.
ಶನಿವಾರ ಬೆಳಗ್ಗೆ 8ಗಂಟೆಗೆ ಮೋದಿ ಅವರು ಭೇಟಿಗೆ ಅವಕಾಶ ನೀಡಿದ್ದಾರೆ ಎಂದು ಸಿಎಂ ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ