*ಕೇಂದ್ರ ಸಚಿವ ನಿತೀಶ್ ಗಡ್ಕರಿ ಮುಂದೆ ಹಲವು ಬೇಡಿಕೆ ಇಟ್ಟ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ರಾಜ್ಯಕ್ಕೆ ಹಲವು ಪ್ರತಿಷ್ಠಿತ ಯೋಜನೆಗಳನ್ನು ಮಂಜೂರು ಮಾಡಿದ್ದಕ್ಕಾಗಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸಚಿವ ನಿತೀಶ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಅಲ್ಲದೆ ಹಲವು ಬೇಡಿಕೆಗಳನ್ನು ಸಲ್ಲಿಸಿದ್ದಾರೆ.
ಶುಕ್ರವಾರ ನವದೆಹಲಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಸಿಎಂ ಭೇಟಿ ಮಾಡಿ, ರಾಜ್ಯದ ಬೇಡಿಕೆಗಳನ್ನು ಸಲ್ಲಿಸಿದ್ದಾರೆ. ರಾಜ್ಯದಲ್ಲಿ , ಬೆಳಗಾವಿ -ಹುನಗುಂದ -ರಾಯಚೂರು ಹೆದ್ದಾರೆ, ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ, ಸೂರತ್-ಚೆನ್ನೈ ಎಕ್ಸ್‌ಪ್ರೆಸ್‌ವೇಬೆಂಗಳೂರು ನಗರಕ್ಕೆ ಸ್ಯಾಟಲೈಟ್ ಟೌನ್ ರಿಂಗ್ ರೋಡ್ ಸೇರಿ ಹಲವು ರಸ್ತೆಗಳ ಅಭಿವೃದ್ಧಿಯಾಗಿದೆ ಎಂದು ಗಡ್ಕರಿ ಅವರಿಗೆ ಸಿಎಂ ಧನ್ಯವಾದ ತಿಳಿಸಿದ್ದಾರೆ.
ಇದಲ್ಲದೇ ರಾಜ್ಯಾದ್ಯಂತ ಇನ್ನೂ, 5225 ಕಿಮೀ ಉದ್ದದ 39 ತಾತ್ವಿಕ ಅನುಮೋದಿತ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಗಳಾಗಿ ಘೋಷಿಸಿ ಅದರ ಅಭಿವೃದ್ಧಿ ಮಾಡಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.
ರಾಜ್ಯದ ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸಲು ಮಂಗಳೂರು – ಬೆಂಗಳೂರು ನಡುವಿನ ಶಿರಾಡಿ ಘಾಟ್‌ಗೆ ಸುರಂಗ ನಿರ್ಮಾಣ, ಮೈಸೂರು ನಗರದ ಮಣಿಪಾಲ್ ಆಸ್ಪತ್ರೆ ಜಂಕ್ಷನ್ (ಕೊಲಂಬಿಯಾ ಏಷ್ಯಾ ಆಸ್ಪತ್ರೆ) ನಲ್ಲಿ ಫ್ಲೈಓವರ್ ನಿರ್ಮಾಣ, ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಮೈಸೂರು ರಿಂಗ್ ರಸ್ತೆಯಲ್ಲಿ ಸಪರೇಟರ್‌ಗಳ ನಿರ್ಮಾಣ.
ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದಿಂದ ಬೈಲಹೊಂಗಲ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸುಧಾರಣೆ ಸೇರಿ ಹಲವು ರಸ್ತೆ ಅಭಿವೃದ್ಧಿಗೆ ನಿಮ್ಮ ಸಹಕಾರ ಬೇಕು ಎಂದು ಗಡ್ಕರಿ ಅವರಿಗೆ ಸಿಎಂ ಮನವಿ ಮಾಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ