ಪ್ರಗತಿವಾಹಿನಿ ಸುದ್ದಿ: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಇದೀಗ ಸಿಎಂ ಸಿದ್ದರಾಮಯ್ಯ ಅವರು ಪಡೆದುಕೊಂಡರು.
ಕೃಷ್ಣ ಅವರ ಹುಟ್ಟೂರು ಮದ್ದೂರಿನ ಸೋಮನಹಳ್ಳಿಗೆ ಸಿಎಂ ಆಗಮಿಸಿ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ಕೆಲಕಾಲ ಕೃಷ್ಣ ಅವರ ಕುಟುಂಬಸ್ಥರೊಂದಿಗೆ ಮಾತನಾಡಿ ಸಾಂತ್ವನ ಹೇಳಿದರು.
ಬೆಂಗಾವಲು ಪಡೆ ವಾಹನದಲ್ಲಿ ಆಗಮಿಸಿದ ಸಿಎಂ ಅವರು ಪಾರ್ಥೀವ ಶರೀರಕ್ಕೆ ಕೈಮುಗಿದು ಅಂತಿಮ ನಮನ ಸಲ್ಲಿಸಿದರು. ಇದೇ ವೇಳೆ ಸಚಿವರಾದ ಕೃಷ್ಣಬೈರೇಗೌಡ, ಚಲುವರಾಯಸ್ವಾಮಿ, ಡಾ.ಜಿ.ಪರಮೇಶ್ವರ್, ಸಂಸದ ಸುಧಾಕರ್ ಸಿಎಂ ಅವರೊಂದಿಗೆ ಕಾಣಿಸಿಕೊಂಡರು. ಇನ್ನು ಕೆಲವೇ ಕ್ಷಣಗಳಲ್ಲಿ ಒಕ್ಕಲಿಗ ಸಂಪ್ರದಾಯದ ವಿಧಿವಿಧಾನಗಳ ಮೂಲಕ ಅಂತ್ಯಕ್ರಿಯೆ ನೆರವೇರಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ