ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸಲಿದ್ದಾರೆ.
ಸೋಮವಾರದಿಂದ ಆರಂಭವಾಗಲಿರುವ ವಿಧಾನ ಮಂಡಳದ ಚಳಿಗಾಲದ ಅಧಿವೇಶನದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.
ಬೆಳಗ್ಗೆ 10.40ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ನೇರವಾಗಿ ಸುವರ್ಣ ವಿಧಾನ ಸೌಧಕ್ಕೆ ಆಗಮಿಸುವರು.
ವಿಧಾನಮಂಡಳದ ಉಭಯ ಸದನಗಳಲ್ಲಿ ಪಾಲ್ಗೊಳ್ಳಲಿರುವ ಅವರು ನಂತರ ಬೆಳಗಾವಿಯಲ್ಲೇ ವಾಸ್ತವ್ಯ ಮಾಡಲಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಮೊದಲ ದಿನ ಅಧಿವೇಶನದಲ್ಲಿ ಪಾಲ್ಗೊಳ್ಳವುದು ತೆಲಂಗಾಣ ಚುನಾವಣೆ ಫಲಿತಾಂಶದ ಮೇಲೆ ಅವಲಂಭಿಸಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ ಬಾರದಿದ್ದಲ್ಲಿ ಡಿ.ಕೆ.ಶಿವಕುಮಾರ ಅಲ್ಲಿಗೆ ತೆರಳುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ