Belagavi NewsBelgaum NewsKannada NewsKarnataka NewsLatest

ಮಂಗಳವಾರ ಬೆಳಗಾವಿಗೆ ಸಿಎಂ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಅ.3) ಬೆಳಗಾವಿಗೆ ಆಗಮಿಸಲಿದ್ದಾರೆ.

ವಿಶೇಷ ವಿಮಾನದ ಮೂಲಕ 10 ಗಂಟೆಗೆ ಬೆಂಗಳೂರಿನಿಂದ ಹೊರಡಲಿರುವ ಮುಖ್ಯಮಂತ್ರಿಗಳು 11.15ಕ್ಕೆ ಸಾಂಬ್ರಾ ವಿಮಾನ ನಿಲ್ದಾಣ ತಲುಪುವರು. ನಂತರ ಇಲ್ಲಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಕುರುಬರ ಸಮಾವೇಶದಲ್ಲಿ ಭಾಗವಹಿಸುವರು. ಈ ಸಮಾವೇಶದಲ್ಲಿ ಮುಖ್ಯಮಂತ್ರಿಗಳ ಜೊತೆಗೆ ಹಲವಾರು ಮಂತ್ರಿಗಳು, ಗಣ್ಯರು ಸಹ ಪಾಲ್ಗೊಳ್ಳುವರು.

ಸಮಾವೇಶದ ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯನ್ನು ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button