ಪ್ರಗತಿವಾಹಿನಿ ಸುದ್ದಿ: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು.
ಗುಡ್ಡ ಕುಸಿತದ ಪರಿಣಾಮ ಸುಮಾರು 20 ಕ್ಕೂ ಹೆಚ್ಚು ಕುಟುಂಬಗಳು ಸಂಪರ್ಕ ಕಳೆದುಕೊಂಡಿದ್ದು , ಇಲ್ಲಿ ತೂಗು ಸೇತುವೆ ನಿರ್ಮಿಸುವ ಜೊತೆಗೆ ತುರ್ತಾಗಿ ರಸ್ತೆ ನಿರ್ಮಾಣದ ಜೊತೆಗೆ ಇತರೆ ದುರಸ್ತಿ ಕಾರ್ಯಗಳನ್ನು ಮಾಡುವಂತೆ ಸೂಚಿಸಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಗುಡ್ಡ ಕುಸಿತದ ಪರಿಣಾಮಗಳನ್ನು ಮತ್ತು ತೆಗೆದುಕೊಳ್ಳಲಾಗಿರುವ ಸುರಕ್ಷತಾ ಕ್ರಮಗಳು ಹಾಗೂ ಕಾಮಗಾರಿಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಬೋಸ್ ರಾಜು, ಶಾಸಕರಾದ ಪೊನ್ನಣ್ಣ , ಮಂಥರ್ ಗೌಡ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ