Kannada NewsKarnataka NewsNationalPolitics

*ಉಪರಾಷ್ಟ್ರಪತಿಗೆ ಸ್ವಾಗತ ಕೋರಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಅವರ ಪತ್ನಿ ಸುದೇಶ ಧನಕ‌ರ್ ಅವರು ಇಂದು ಬೆಂಗಳೂರಿಗೆ ಭೇಟಿ ನೀಡಿದ್ದಾರೆ.

ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಅವರನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರಾದ ಎಮ್ ಸಿ ಸುಧಾಕರ್ ಸೇರಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ರಾಜ್ಯದ ಹಿರಿಯ ಅಧಿಕಾರಿಗಳು ಹೆಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿರುವ ಎಲ್ಲಾ ರಾಜ್ಯಗಳ ಲೋಕಸೇವಾ ಆಯೋಗಗಳ 25ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನಂತರ, ಬಿಇಎಲ್‌ನ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಬಿಹೆಚ್‌ ಇಎಲ್‌ನಲ್ಲಿ ಹಮ್ಮಿಕೊಳ್ಳಲಾಗಿರುವ ವಿಜ್ಞಾನಿಗಳು ಮತ್ತು ಅಧಿಕಾರಿಗಳೊಂದಿಗೆ ಸಂವಾದದಲ್ಲಿ ಭಾಗವಹಿಸಿ ಇಂದು ಸಂಜೆಯೇ ನವದೆಹಲಿಗೆ ತೆರಳಲಿದ್ದಾರೆ.

Home add -Advt

Related Articles

Back to top button