Latest

*ಬಿಜೆಪಿ ನಾಯಕರಿಗೆ ಬಡವರ ಬಗ್ಗೆ ಕಾಳಜಿ ಇದ್ದರೆ ಕೇಂದ್ರದಿಂದ ಅಕ್ಕಿ ಕೊಡಿಸಲಿ; ಸಿಎಂ ಸಿದ್ದರಾಮಯ್ಯ ಸವಾಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹೆಚ್ಚುವರಿ ಅಕ್ಕಿ ನೀಡುವ ವಿಚಾರವಾಗಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ. ರಾಜ್ಯದ ಬಿಜೆಪಿ ನಾಯಕರು ಕಾಂಗ್ರೆಸ್ ಯೋಜನೆ ಬಗ್ಗೆ ವ್ಯಂಗ್ಯವಾಡುವ ಬದಲು ಅಕ್ಕಿ ಕೊಡಿಸಲಿ ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾವು ಉಚಿತ ಅಕ್ಕಿ ಘೋಷಣೆ ಮಾಡಿದ್ದು, ಬಡವರು ಅನ್ನಮಾಡಿ ತಿನ್ನಲಿ ಎಂದು. ಅಕ್ಕಿ ವಿಚಾರವಾಗಿಯೂ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ. ಬಿಜೆಪಿ ನಾಯಕರಿಗೆ ಬಡವರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ಕಿಡಿಕಾರಿದರು.

ಮೊದಲು ಭಾರತೀಯ ಆಹಾರ ನಿಗಮ ಅಕ್ಕಿ ಕೊಡುವುದಾಗಿ ಹೇಳಿತ್ತು. ನಂತರ ಜೂನ್ 12ರಂದು ಪತ್ರ ಬರೆದು ಅಕ್ಕಿ ಕೊಡಲು ಆಗುವುದಿಲ್ಲ ಎಂದು ತಿಳಿಸಿದೆ. ಬಡವರ ಕಾರ್ಯಕರಮಕ್ಕೆ ಈ ರೀತಿ ಅಡ್ಡಿ ಪಡಿಸುವುದು ಯಾಕೆ? ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ರಾಜ್ಯ ಬಿಜೆಪಿ ನಾಯಕರಿಗೆ ಬಡವರ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದ್ದರೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ಅಕ್ಕಿ ಕೊಡಿಸಲಿ ಎಂದು ಸವಾಲು ಹಾಕಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button