Latest

*ಸಿಇಒ, ಜಿಲ್ಲಾಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯುಂಟಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳ ಸಭೆ ನಡೆಸಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ರಾಜ್ಯದ 8 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ನಿಟ್ಟಿನಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು, ಸಿಇಒಗಳ ಸಭೆ ನಡೆಸಿ ಚರ್ಚಿಸಿದರು. ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಸಮಸ್ಯೆ ಆಗಬಾರದು. ಕುಡಿಯುವ ನೀರಿಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತಕ್ಷಣ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಕೊಪ್ಪಳದಲ್ಲಿ ಕಲುಷಿತ ನೀರಿಗೆ ಮೂವರು ಬಲಿಯಾದ ಪ್ರಕರಣ ಹಾಗೂ ಗ್ರಾಮಸ್ಥರು ಅಸ್ವಸ್ಥರಾಗಿರುವ ಪ್ರಕರಣದ ವಿಚಾರವಾಗಿ ಕೊಪ್ಪಳ ಜಿಲ್ಲಾ ಪಂಚಾಯತ್ ಸಿಇಒ ಅವರನ್ನು ತಾರಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ, ನೀವು ಜನರನ್ನು ಸಾಯಿಸಲು ಇರುವುದಾ? ಕಳಪೆ ಕಾಮಗಾರಿಯಿಮ್ದಾಗಿಯೇ ಕಲುಷಿತ ನೀರು ಪ್ರಕರಣಕ್ಕೆ ಕಾರಣ. ಮೊದಲ ಪ್ರಕರಣ ಸಂಭವಿಸಾದಗಲೇ ಯಾಕೆ ಎಚ್ಚೆತ್ತುಕೊಂಡಿಲ್ಲ? ತಕ್ಷಣ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಯಾಕೆ ನಡೆಸಿಲ್ಲ? ಎಂದು ಕ್ಲಾಸ್ ತೆಗೆದುಕೊಂಡಿದ್ದಾರೆ.

ಅಧಿಕಾರಿಗಳ ವಿಶೇಷ ತಂಡ ರಚನೆ ಮಾಡಿ ಪ್ರಕರಣದ ತನಿಖೆ ನಡೆಸಿ ಎಂದು ಸೂಚಿಸಿದ್ದಾರೆ. ಅಲ್ಲದೇ ಇಂತಹ ಪ್ರಕರಣ ಮತ್ತೆ ಮರುಕಳಿಸಬಾರು. ಒಂದು ವೇಳೆ ಮರುಕಳಿಸಿದರೆ ಜಿಲ್ಲಾ ಪಂಚಾಯತ್ ಸಿಇಒಗಳನ್ನೆ ಹೊಣೆಗಾರರನ್ನಾಗಿ ಮಾಡಿ ಸಸ್ಪೆಂಡ್ ಮಾಡುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button