ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲಿಂಗಾಯಿತ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಜನಪ್ರತಿನಿಧಿಗಳ ನ್ಯಾಯಾಲಯ ವಜಾಗೊಳಿಸಿದೆ.
ಶಂಕರ್ ಶೇಟ್ ಎಂಬುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ಸಲ್ಲಿಸಿದ್ದ ಖಾಸಗಿ ದೂರನ್ನು ವಜಾಗೊಳಿಸಿ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.
ವಿಧಾನಸಭಾ ಚುನಾವಣೆ ವೇಳೆ ಅಂದಿನ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸುವ ವೇಳೆ ಲಿಂಗಾಯಿತ ಸಿಎಂಗಳು ಭ್ರಷ್ಟರು ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್ ಹಾಕಲಾಗಿತ್ತು. ಜನಪ್ರತಿನಿಧಿಗಳ ವಿಶೇಶ ನ್ಯಾಯಾಲಯದ ನ್ಯಾಯಮೂರ್ತಿ ಪ್ರೀತ್ ಜೆ ಮಾನನಷ್ಟಮೊಕದ್ದಮೆ ಅರ್ಜಿ ವಜಾಗೊಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ