Kannada News

ರಾಜ್ಯದಲ್ಲಿ ಮತ್ತೆ 11 ಜನರಲ್ಲಿ ಕೊರೊನಾ ದೃಢ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇಂದು ಒಂದೇ ದಿನದಲ್ಲಿ 11 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಅವರಲ್ಲಿ ಬೆಳಗಾವಿಯಲ್ಲಿ ಹೆಚ್ಚು ಪ್ರಕರಣ ಪತ್ತೆಯಾಗಿದೆ.

ಬೆಳಗಾವಿಯಲ್ಲಿ ಒಬ್ಬನಿಂದಲೇ ಮೂವರಿಗೆ ಕೊರೊನಾ ಸೋಂಕು ಹರಡಿದ್ದು, ಇಂದು ಒಟ್ಟು ನಾಲ್ಕು ಪ್ರಕರಣಗಳು ಪತ್ತೆಯಾಗಿವೆ. ಬೆಳಗಾವಿ ಜಿಲ್ಲೆಯ ರಾಯಭಾಗದ ಮೂವರಿಗೆ ಮತ್ತು ಹೀರೇಬಾಗೆವಾಡಿಯ ಒಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

Home add -Advt

ವಿಜಯಪುರದಲ್ಲಿ ಮೊದಲ ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಜನತೆಯಲ್ಲಿ ಆತಂಕ ಮನೆ ಮಾಡಿದೆ. ಕಲಬುರಗಿಯ ಸತ್ತ ವೃದ್ಧನಿಂದ ಇಬ್ಬರಿಗೆ, ಮೈಸೂರಿನ ಒಬ್ಬರಲ್ಲಿ ಇನ್ನು ಬೆಂಗಳೂರಿನಲ್ಲಿ ಇಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ.

ಮೈಸೂರಿನಲ್ಲಿ 32 ವರ್ಷದ ಪುರುಷ, ಕಲಬುರಗಿಯಲ್ಲಿ 24 ವರ್ಷದ ಮಹಿಳೆ ಹಾಗೂ ಸೋಂಕಿತ ವ್ಯಕ್ತಿಯ ಸೊಸೆಯಲ್ಲಿ ಕೂಡ ಕೊರೊನಾ ದೃಢಪಟ್ಟಿದೆ. ಇನ್ನು ಬೆಂಗಳೂರಿನಲ್ಲಿ ಮತ್ತೆ ಮೂರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 226ಕ್ಕೆ ಏರಿಕೆಯಾಗಿದೆ.

ಬೆಳಗಾವಿಯಲ್ಲಿಂದು ಮತ್ತೆ 4 ಜನರಲ್ಲಿ ಸೋಂಕು ಪತ್ತೆ – ಸೋಂಕಿತರ ಒಟ್ಟು ಸಂಖ್ಯೆ 14 ಕ್ಕೆ ಏರಿಕೆ

Related Articles

Back to top button