LatestUncategorized

*ವಿದ್ಯುತ್ ದರದ ಬಗ್ಗೆ ಬಿಜೆಪಿ ಪರಿವಾರ ಪರಮ ಸುಳ್ಳು ಹರಡುತ್ತಿದೆ; ಸಿಎಂ ಸಿದ್ದರಾಮಯ್ಯ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬರೀ ಶ್ರೀಮಂತರ ಹಿತ ಕಾಯುವ ಬಿಜೆಪಿ ಯವರಿಗೆ ನಮ್ಮ ಕಾಳಜಿ ಸಹಿಸಲು ಆಗುತ್ತಿಲ್ಲ. ನಮ್ಮ ಗುರಿ ಜನರ ಸಂಕಷ್ಟ ತಗ್ಗಿಸುವುದು. ಪ್ರಮಾಣವಚನ ಸ್ವೀಕರಿಸಿ ಕೇವಲ 20 ದಿನಗಳಲ್ಲಿ ಮೊದಲ ಗ್ಯಾರಂಟಿ ಜಾರಿಯಾಗಿದ್ದು, ನಾಡಿನ ಮಹಿಳೆಯರು ಉಚಿತ ಬಸ್ ಪ್ರಯಾಣದ ಅನುಕೂಲ ಪಡೆಯುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ, ಕಳೆದ 20 ದಿನಗಳಲ್ಲಿ ಬಿಜೆಪಿ ಪರಿವಾರ ಸುಳ್ಳಿನ ಮಹಾಪೂರವನ್ನೇ ಹರಿಸಿತು. ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸುತ್ತಾ ಜನರಲ್ಲಿ ಗೊಂದಲ ಉಂಟುಮಾಡುತ್ತಿದ್ದರು. ಆದರೂ ನಾವು ವಿಚಲಿತರಾಗಲಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. “ಶಕ್ತಿ ಯೋಜನೆ” ಜಾರಿಗೆ ತಂದಿದ್ದೇವೆ ಎಂದರು.

ಬಿಜೆಪಿಯವರು ಸುಳ್ಳುಗಳ ಮೂಲಕ ಗುಲ್ಲೆಬ್ಬಿಸಿ ಗೊಂದಲ ಸೃಷ್ಟಿಸಿದರು. ಸುಳ್ಳು ಹೇಳುತ್ತಾ ಜನರಿಗೆ ತಪ್ಪು ಸಂದೇಶ ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಮಾಧ್ಯಮದವರು ಬಿಜೆಪಿಯವರ ಜತೆ ಸೇರಿ ಗೊಂದಲ ಹೆಚ್ಚಿಸಬಾರದು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಶಿಫಾರಸ್ಸಿನಂತೆ ಮೊನ್ನೆ ವಿದ್ಯುತ್ ದರ ಹೆಚ್ಚಳವಾಗಿದೆ. ಆದರೆ, ಕಾಂಗ್ರೆಸ್ ಸರ್ಕಾರವೇ ವಿದ್ಯುತ್ ದರ ಹೆಚ್ಚಿಸಿದ್ದು ಎಂದು ಪರಮ ಸುಳ್ಳನ್ನು ಬಿಜೆಪಿ ಪರಿವಾರ ಹರಡಿಸುತ್ತಿದೆ ಎಂದು ಮುಖ್ಯಮಂತ್ರಿಗಳು ಟೀಕಿಸಿದರು.

Home add -Advt

Related Articles

Back to top button