Latest

*ಡಚ್‌ ಕೈಗಾರಿಕೋದ್ಯಮಗಳ ಹೂಡಿಕೆಗೆ ಉತ್ತೇಜನ: ಸಿಎಂ ಭರವಸೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನಲ್ಲಿ ನೆದರ್‌ಲ್ಯಾಂಡ್‌ನ ಕಾನ್ಸುಲೇಟ್‌ ಜನರಲ್‌ ಎವೊಟ್‌ ಡಿ ವಿಟ್‌ (Ewout de Wit) ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್‌ ಕೃಷ್ಣ ಉಪಸ್ಥಿತರಿದ್ದರು.

ನೆದರ್‌ಲ್ಯಾಂಡ್‌ ದೇಶವು ರಾಜ್ಯದಲ್ಲಿ ಗಣನೀಯ ಪ್ರಮಾಣದಲ್ಲಿ ಹೂಡಿಕೆ ಮಾಡಿದ್ದು, ಒಟ್ಟಾರೆ ಹೂಡಿಕೆಯ ಶೇ. 9 ರಷ್ಟಿದೆ. ಸುಸ್ಥಿರ ಇಂಧನ, ಇಲೆಕ್ಟ್ರಾನಿಕ್ಸ್‌, ಸೆಮಿಕಂಡಕ್ಟರ್‌ ಮೊದಲಾದ ಉದ್ಯಮಗಳಲ್ಲಿ ವಿಶೇಷವಾಗಿ ನಾವೀನ್ಯತಾ ವಲಯದಲ್ಲಿ ನೆದರ್‌ಲ್ಯಾಂಡ್‌ ವಿಶೇಷ ಆಸಕ್ತಿ ಹೊಂದಿದೆ ಎಂದು ವಿವರಿಸಿದರು.
ಸೆಪ್ಟೆಂಬರ್‌ ನಲ್ಲಿ ನೆದರ್‌ ಲ್ಯಾಂಡಿನ ಪ್ರಧಾನಿ ಭಾರತಕ್ಕೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಬೆಂಗಳೂರಿಗೂ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ವಾಣಿಜ್ಯೋದ್ಯಮಿಗಳ ನಿಯೋಗವು ರಾಜ್ಯದೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ಹೂಡಿಕೆಯ ಕುರಿತು ಚರ್ಚಿಸಲು ಉತ್ಸುಕವಾಗಿದೆ ಎಂದು ತಿಳಿಸಿದರು.

Related Articles

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕವು ಕೈಗಾರಿಕೋದ್ಯಮದಲ್ಲಿ ಮುಂಚೂಣಿಯ ರಾಜ್ಯವಾಗಿದೆ. ವಿಶೇಷವಾಗಿ ಐಟಿ, ಬಿಟಿ ವಲಯದಲ್ಲಿ ನಂ. 1 ಸ್ಥಾನದಲ್ಲಿದೆ. ಶಾಂತಿಯುತ ರಾಜ್ಯ ಹಾಗೂ ಕೌಶಲ್ಯಯುತ ಮಾನವ ಸಂಪನ್ಮೂಲ ಲಭ್ಯವಿರುವುದರಿಂದ ಹೂಡಿಕೆಗೆ ಅತ್ಯುತ್ತಮ ತಾಣವಾಗಿದೆ. ರಾಜ್ಯದಲ್ಲಿ ನೆದರ್‌ಲ್ಯಾಂಡ್‌ ಕಂಪೆನಿಗಳ ನೆಲೆಯನ್ನು ಉತ್ತೇಜಿಸಲು ಎಲ್ಲ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತರಾದ ಗುಂಜನ್‌ ಕೃಷ್ಣ ಅವರು ಉಪಸ್ಥಿತರಿದ್ದರು.

Home add -Advt

https://pragati.taskdun.com/lakshmi-hebbalkarmeetvenkatesh-prasadbangalore-airport/

Related Articles

Back to top button