Kannada NewsKarnataka NewsLatestPolitics
*ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನಿಂದ ನೋಟಿಸ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಾಸಕತ್ವ ಅಸಿಂಧುಗೊಳಿಸುವಂತೆ ಕೋರಲಾಗಿದ್ದ ಅರ್ಜಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸಿದ್ದರಾಮಯ್ಯನವರಿಗೆ ನೋಟಿಸ್ ಜಾರಿ ಮಾಡಿದೆ.
ಮತದಾರರಿಗೆ ಆಮಿಷವೊಡ್ಡಿದ್ದಾರೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯನವರ ಶಾಸಕ ಸ್ಥಾನದ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಕೆ.ಎಂ.ಶಂಕರ್ ಎಂಬುವವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸಹಿ ಇರುವ ಗ್ಯಾರಂಟಿ ಯೋಜನೆಗಳ ಕಾರ್ಡ್ ವಿತರಿಸಿ ಮತದಾರರಿಗೆ ಆಮಿಷವೊಡ್ಡಿದೆ. ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123(1) ಪ್ರಕಾರ ಮತದಾರರಿಗೆ ಆಮಿಷವೊಡ್ಡುವಂತಿಲ್ಲ. ಹೀಗಾಗಿ ಸಿದ್ದರಾಮಯ್ಯ ಶಾಸಕ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೆ.ಎಂ. ಶಂಕರ್ ಅರ್ಜಿ ಸಲ್ಲಿಸಿದ್ದರು. ಇದೀಗ ಅರ್ಜಿಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರಿಗೆ ಹೈಕೋರ್ಟ್ ನೋಟಿಸ್ ನೀಡಿದೆ.
