Wanted Tailor2
Cancer Hospital 2
Bottom Add. 3

*ಬರಪೀಡಿತ ಜಿಲ್ಲೆಗಳಲ್ಲಿ ಸಂಚರಿಸಿ, ಬರ ಪರಿಹಾರಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬರಪೀಡಿತ ಜಿಲ್ಲೆಗಳಲ್ಲಿ ಸಂಚರಿಸಿ, ಬರ ಪರಿಹಾರಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ರಾಜ್ಯದ 236, ತಾಲೂಕುಗಳ ಪೈಕಿ ಇದುವರೆಗೆ 216 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ. ಬರದ ಹಿನ್ನೆಲೆಯಲ್ಲಿ ಜನ- ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಕೃಷಿ-ಕೈಗಾರಿಕೆಗಳಿಗೆ ನೀರು, ಬೆಳೆಹಾನಿ, ಜನರ ಉದ್ಯೋಗದ ಸ್ಥಿತಿ ಬರ ಪರಿಹಾರ ವಿತರಣೆ ಮುಂತಾದ ಬರ ನಿರ್ವಹಣೆ ಕಾರ್ಯಕ್ರಮಗಳನ್ನು ಕೈಗೊಳ್ಳುವ ಕುರಿತು ಸಚಿವ ಸಂಪುಟ ಸಭೆಗಳಲ್ಲಿ ಚರ್ಚಿಸಲಾಗಿದೆ. ಹಾಗೂ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೂ ಹಲವು ಬಾರಿ ನಿರ್ದೇಶನಗಳನ್ನು ನೀಡಲಾಗಿದೆ.

ಆದ್ದರಿಂದ, ಜಿಲ್ಲಾ ಉಸ್ತುವಾರಿ ಸಚಿವರುಗಳು ಮುಂದಿನ ಎರಡು ವಾರಗಳಲ್ಲಿ ತಮ್ಮ ಉಸ್ತುವಾರಿ ಜಿಲ್ಲೆಯ ಪ್ರತಿ ತಾಲ್ಲೂಕುಗಳಿಗೆ ಭೇಟಿ ನೀಡಿ, ಕುಡಿಯುವ ನೀರು, ಮೇವು, ಉದ್ಯೋಗ, ಬೆಳಹಾನಿ, ಮುಂತಾದವುಗಳ ಸ್ಥಿತಿಗತಿಗಳ ಕುರಿತು ಪರಿಶೀಲಿಸಿ, ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯ ಮಾಹಿತಿ ಸಂಗ್ರಹಿಸುವುದು ಹಾಗೂ ಸ್ಥಳೀಯ ಶಾಸಕರೊಂದಿಗೆ ಗೋಶಾಲೆ, ಮೇವು ಬ್ಯಾಂಕ್, ಕುಡಿಯುವ ನೀರು, ಉದ್ಯೋಗ ಸೃಷ್ಟಿ ಮುಂತಾದ ಪರಿಹಾರ ಕ್ರಮಗಳ ಬಗ್ಗೆ ಸಮಾಲೋಚಿಸಿ, ಅಗತ್ಯವಿರುವ ಕಡೆ ಭೇಟಿ ನೀಡಿ ಪರಿಶೀಲಿಸುವುದು, ಬರ ನಿರ್ವಹಣೆ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ವೈಫಲ್ಯಗಳಾಗದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಬೇಕು ಎಂದು ಸೂಚಿಸಿದ್ದಾರೆ.

ಬರ ಪರಿಸ್ಥಿತಿಯ ಸಂಪೂರ್ಣ ವಸ್ತುಸ್ಥಿತಿ ಹಾಗೂ ಜಿಲ್ಲೆಗಳಲ್ಲಿ ಕೈಗೊಳ್ಳಲಾದ ಬರ ನಿರ್ವಹಣೆ ಕಾರ್ಯಕ್ರಮಗಳ ಬಗ್ಗೆ, ಪ್ರತಿ ತಾಲ್ಲೂಕುಗಳಲ್ಲಿ ಮಾಧ್ಯಮಗಳಿಗೆ ವಿವರಿಸಿ, ದಿನಾಂಕ: 15.11.2023ರೊಳಗೆ ವರದಿ ನೀಡಬೇಕು ಎಂದು ತಿಳಿಸಿದ್ದಾರೆ.

Bottom Add3
Bottom Ad 2

You cannot copy content of this page