Latest

*ಹಾಲಿನ ಪ್ರೋತ್ಸಾಹ ಧನ ಕಡಿತ; ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಹಾಲು ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಬಮೂಲ್ ಪ್ರೋತ್ಸಾಹ ಧನ ಕಡಿತ ಮಾಡಿದೆ ಎಂಬ ವರದಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದ್ದಾರೆ.

ಕರ್ನಾಟಕ ಹಾಲು ಮಹಾ ಮಂಡಳಿ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಏಕಾಏಕಿ ದರ ಕಡಿತ ಮಾಡುವಂತಿಲ್ಲ. ಈ ಕುರಿತು ಸರ್ಕಾರದ ಜೊತೆ ಚರ್ಚಿಸಬೇಕು. ದರ ಕಡಿತ ಮಾಡಿದರೆ ರೈತರಿಗೆ ತೊಂದರೆಯಾಗುತ್ತದೆ. ಈ ಅಂಶವನ್ನು ಗಮನದಲ್ಲಿ ಇರಿಸಿಕೊಳ್ಳಬೇಕು ಎಂದು ತರಾಟೆಗೆ ತೆಗೆದುಕೊಂಡರು.

https://pragati.taskdun.com/odisha-train-ragidysignal-problemjaya-varma/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button