Kannada NewsKarnataka NewsLatestPolitics

*ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವಿಧಾನಸೌಧದಲ್ಲಿ ಆಯೋಜಿಸಿದ್ದ ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ ಬೃಹತ್ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂವಿಧಾನ ಪೀಠಿಕೆ ಓದುವ ಮೂಲಕ ಉದ್ಘಾಟಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಗೃಹ ಸಚಿವ ಜಿ.ಪರಮೇಶ್ವರ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹಾಗೂ ಸಚಿವರುಗಳಾದ ಮಂಕಾಳ ವೈದ್ಯ, ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಈಶ್ವರ್ ಖಂಡ್ರೆ, ವಿಧಾನಪರಿಷತ್ ಸಭಾಪತಿ ಹೊರಟ್ಟಿ,ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಗೋವಿಂದರಾಜು, ವಿಧಾನ ಪರಿಷತ್ ಸದಸ್ಯರಾದ ಸುದಾಮ್ ದಾಸ್ ಸೇರಿ 10 ಕ್ಕೂ ಹೆಚ್ಚು ಶಾಸಕರು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿ ಪೊಲೀಸ್ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button