ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ ಆಶಾ ಕಾರ್ಯಕರ್ತರೆಯರಿಗೂ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ.
ಕಳೆದ ನಾಲ್ಕು ತಿಂಗಳಿಂದ ವೇತನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತೆಯರು ಇಂದು ಸಿಎಂ ಗೃಹ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವೇತನ ಬಿಡುಗಡೆ ಹಾಗೂ ವೇತನ ಹೆಚ್ಚಳ ಮಾಡುವಂತೆ ಮನವಿ ಮಾಡಿದರು.
ಕಳೆದ ನಾಲ್ಕು ತಿಂಗಳಿಂದ ವೇತನ ಬಿಡುಗಡೆಯಾಗಿಲ್ಲ, ಇದರಿಂದ ಸಮಸ್ಯೆಯಾಗಿದೆ ಎಂದು ಸಂಕಷ್ಟ ತೋಡಿಕೊಂಡರು. ಈ ವೇಳೆ ಸಿಎಂ ಸಿದ್ದರಾಮಯ್ಯ, ಆಶಾ ಕಾರ್ಯಕರ್ತೆಯರ ಸಮಸ್ಯೆಯನ್ನು ಇಂದೇ ಬಗೆಹರಿಸುವುದಾಗಿ ತಿಳಿಸಿದ್ದಾರೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದ್ದಾರೆ.
https://pragati.taskdun.com/trafic-ruls-breakcriminal-casefir/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ