ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಎಐಸಿಸಿ ವರಿಷ್ಠರಾದ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದು, ಈ ವೇಳೆ ರಾಹುಲ್ ಗಾಂಧಿ ಕೂಡ ಉಪಸ್ಥಿತರಿದ್ದರು.
ಸೋನಿಯಾ ಗಾಂಧಿಯವರು ಶಿಮ್ಲಾ ಪ್ರವಾಸದಿಂದ ನಿನ್ನೆಯಷ್ಟೇ ದೆಹಲಿಗೆ ವಾಪಸ್ ಆಗಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ