ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪುರ್ಣ ಪ್ರಮಾಣದಲ್ಲಿ ಸಚಿವ ಸಂಪುಟ ರಚನೆ ಮಾಡಲಾಗಿದೆ. ಪೂರ್ಣ ಪ್ರಮಾಣದಲ್ಲಿ ಸಂಪುಟ ರಚಿಸಿದರೆ ಉತ್ತಮ ಕೆಲಸ ಮಾಡಲು ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾವು ನುಡಿದಂತೆ ನಡೆಯುತ್ತೇವೆ. ಈ ಹಿಂದೆಯೂ ಕೂಡ ನಾವು ನುಡಿದಂತೆ ನಡೆದಿದ್ದೇವೆ. ಈಗಲೂ ನುಡಿದಂತೆ ನಡೆಯುತ್ತೇವೆ ಎಂದರು.
ಗ್ಯಾರಂಟಿ ಯೋಜನೆ ಬಗ್ಗೆ ಬಿಜೆಪಿ ಟೀಕೆ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಯವರು ರಾಜಕಾರಣಕ್ಕಾಗಿ ಟೀಕೆ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಮಾತನಾಡಲು ಏನು ನೈತಿಕತೆ ಇದೆ ಎಂದು ತಿರುಗೇಟು ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ