Kannada NewsKarnataka NewsLatestPolitics
*ರಿಲ್ಯಾಕ್ಸ್ ಮೂಡ್ ಗೆ ಜಾರಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2023-24ನೇ ಸಾಲಿನ ಬಜೆಟ್ ಮಂಡನೆ ಬಳಿಕ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ.
ನಿನ್ನೆ ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ನಿರಂತರ 3 ಗಂಟೆಗಳ ಕಾಲ ಸುದೀರ್ಘವಾಗಿ 14ನೇಯ ದಾಖಲೆ ಬಜೆಟ್ ಮಂಡಿಸಿದ್ದರು. ಬಜೆಟ್ ಮಂಡನೆ ಬಳಿಕ ಇಂದು ಸಿಎಂ ಸಿದ್ದರಾಮಯ್ಯ ರಿಲ್ಯಾಕ್ಸ್ ಮಾಡುತ್ತಿದ್ದು, ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ.
ಇನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಜನೀಶ್ ಗೋಯಲ್, ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಸಿಎಂ ಸಿದ್ದರಮಾಯ್ಯ ಅವರನ್ನು ಭೇಟಿಯಾಗಿದ್ದಾರೆ.




