ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ 36 ಕಾಂಗ್ರೆಸ್ ಮುಖಂಡರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಸೇರಿದಂತೆ 36 ಕಾಂಗ್ರೆಸ್ ಮುಖಂಡರ ವಿರುದ್ಧ ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಜುಲೈ 28ರಂದು ಎಲ್ಲರೂ ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಿದೆ. ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ವೇಳೆ ನಿಯಮ ಉಲ್ಲಂಘನೆ ಮಾಡಿದ ಆರೋಪದಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ