ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಸಚಿವ ಕೆಎಸ್ ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಆಗ್ರಹಿಸಿ ವಿಧಾನ ಸಭೆಯಲ್ಲಿ ಕಾಂಗ್ರೆಸ್ ನಾಯಕರು ಅಹೋರಾತ್ರಿ ಧರಣಿ ನಿರತರಾಗಿದ್ದಾರೆ.
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿಯಲ್ಲಿ ಬೆಳಗಾವಿಯ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸಹ ಭಾಗವಹಿಸಿದ್ದಾರೆ.
ಕಾಂಗ್ರೆಸ್ಸಿಗರ ಮನವೊಲಿಸಲು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸ್ಪೀಕರ್ ರಮೇಶ ಕುಮಾರ, ಸಚಿವ ಆರ್.ಅಶೋಕ ಮತ್ತಿತರರು ಯತ್ನಿಸಿದರು.
ಈಶ್ವರಪ್ಪ ಕೈಬಿಡಲು ಆಗ್ರಹಿಸಿ ಕಾಂಗ್ರೆಸ್ ಅಹೋರಾತ್ರಿ ಧರಣಿ ಆರಂಭ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ