ಡಿ.ಕೆ. ಶಿವಕುಮಾರ್ ತಮ್ಮ ಪಕ್ಷದತ್ತ ಗಮನ ಹರಿಸಲಿ: ಸಿಎಂ ತಿರುಗೇಟು

ಪ್ರಗತಿವಾಹಿನಿ ಸುದ್ದಿ, ಹುಬ್ಬಳ್ಳಿ :

ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ವಿಭಜನೆ ಯಾಗುವ ಹಂತದಲ್ಲಿದೆ. ಡಿ.ಕೆ. ಶಿವಕುಮಾರ್ ತಮ್ಮ ಪಕ್ಷದ ವಿಚಾರಗಳತ್ತ ಮೊದಲು ಗಮನ ಹರಿಸಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಂಗಳೂರಿಗೆ ತೆರಳುವ ಮುನ್ನ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು. ಈ ಸಂದರ್ಭದಲ್ಲಿ ಹಾನಗಲ್ ಸೋಲಿನ ನಂತರ ಬಿಜೆಪಿ ಶಾಸಕರು ಕಾಂಗ್ರೆಸ್ ಸೇರಲು ಸಿದ್ಧರಾಗಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯವರು, ಸಿಂದಗಿಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ರಾಷ್ಟ್ರಮಟ್ಟದಲ್ಲಿ ಪಕ್ಷ ವಿಭಜನೆ ಯಾಗುವ ಹಂತದಲ್ಲಿದ್ದು ಅವರು ತಮ್ಮ ಪಕ್ಷದತ್ತ ಗಮನ ಹರಿಸಲಿ ಎಂದರು.

ಇಂದಿನಿಂದಲೇ ನೈಟ್ ಕರ್ಫ್ಯೂ ರದ್ದು

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button