ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೇ 17ರಂದು ನವದೆಹಲಿಗೆ ತೆರಳಲಿದ್ದಾರೆ.
2 ಅಥವಾ 3 ದಿನದ ಭೇಟಿ ಇದಾಗಿದ್ದು, ರಾಜಕೀಯ ಕಾರಣಗಳಿಗಾಗಿ ಕುತೂಹಲ ಮೂಡಿಸಿದೆ.
ಹೈಕಮಾಂಡ್ ಯಡಿಯೂರಪ್ಪ ಅವರನ್ನು ಕರೆಸಿಕೊಳ್ಳುತ್ತಿದೆಯೋ, ಯಡಿಯೂರಪ್ಪ ಅವರೇ ಹೈಕಮಾಂಡ್ ಭೇಟಿಗೆ ಅವಕಾಶ ಪಡೆದಿದ್ದಾರೋ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.
ರಾಜ್ಯದಲ್ಲಿ ಮಂತ್ರಿಮಂಡಳ ವಿಸ್ತರಣೆಗಾಗಿ ಯಡಿಯೂರಪ್ಪ ಹೈಕಮಾಂಡ್ ಅನುಮತಿ ಕೇಳಿದ್ದರು. ಎಂಟಿಬಿ ನಾಗರಾಜ, ಯೋಗೀಶ್ವರ, ಉಮೇಶ ಕತ್ತಿ, ಎಚ್.ವಿಶ್ವನಾಥ ಮತ್ತಿತರನ್ನು ಸಚಿವಸಂಪುಟ ಸೇರಿಸಿಕೊಳ್ಳಬೇಕಿದೆ. ಇದಕ್ಕೆ ಹೈಕಮಾಂಡ್ ಒಪ್ಪಿಗೆ ಅಗತ್ಯ. ಹಾಗಾಗಿ ಕಳೆದ ಕೆಲವು ದಿನಗಳಿಂದ ಹೈಕಮಾಂಡ್ ಭೇಟಿಗೆ ಅವಕಾಶ ಕೇಳುತ್ತಲೇ ಇದ್ದಾರೆ.
ಇದೇ ವೇಳೆ ರಾಜ್ಯದಲ್ಲಿ ನಾಯಕತ್ವ ಬದಲಾಗಲಿದೆ ಎನ್ನುವ ಸುದ್ದಿಯೂ ಹರಡುತ್ತಿದೆ. ಹಾಗಾಗಿ ಯಡಿಯೂರಪ್ಪ ಅವರ ದೆಹಲಿ ಭೇಟಿ ಕುತೂಹಲ ಮೂಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ