ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮತ್ತೆ ಕೊರೋನಾ ಆತಂಕ ಹೆಚ್ಚಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಮಹತ್ವದ ಸಭೆ ಕರೆದಿದ್ದಾರೆ.
ಮಧ್ಯಾಹ್ನ 12.30ಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದ್ದು, ಕೊರೋನಾದ ಸಧ್ಯದ ಸ್ಥಿತಿಗತಿ, ಮುನ್ನೆಚ್ಚರಿಕೆ ಕ್ರಮಗಳ ಕುರಿತು ಹಿರಿಯ ಅಧಿಕಾರಿಗಳು ಹಾಗೂ ಹಿರಿಯ ಸಚಿವರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.
ಕಂದಾಯ ಸಚಿವ ಆರ್.ಅಶೋಕ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಆರೋಗ್ಯ ಸಚಿವ ಸುಧಾಕರ ಮತ್ತು ಆರೋಗ್ಯ ಹಾಗೂ ಮೆಡಿಕಲ್ ಎಜುಕೇಶನ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಉನ್ನತ ಶಿಕ್ಷಣ ಸಚಿವರು, ತಜ್ಞರ ಸಮಿತಿ ಚೇರಮನ್ ಮತ್ತು ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸುವರು. ರಾಜ್ಯದ ಮುಖ್ಯ ಕಾರ್ಯದರ್ಶಿ ಹಾಗೂ ಸಹಾಯಕ ಆಯುಕ್ತರನ್ನು ಸಹ ಸಭೆಗೆ ಆಹ್ವಾನಿಸಲಾಗಿದೆ.
ದೇಶದ ಅನೇಕ ಭಾಗಗಳಲ್ಲಿ ಮತ್ತು ರಾಜ್ಯದಲ್ಲಿ ಸಹ ಕೊರೋನಾ 4ನೇ ಅಲೆಯ ಆತಂಕ ಎದುರಾಗಿದೆ. ಪ್ರಕರಣಗಳ ಸಂಖ್ಯೆ ಮತ್ತೆ ಏರುಮುಖವಾಗಿದೆ. ಇನ್ನೇನು ಕೊರೋನಾ ಹೋಯಿತು ಎನ್ನುವ ಹೊತ್ತಿಗೆ ಮತ್ತೆ ಎಲ್ಲೆಡೆ ಆತಂಕ ಸೃಷ್ಟಿಸಿದೆ. ನಿಯಮಗಳನ್ನು ಸಡಿಲಗೊಳಿಸಬೇಕೆನ್ನುವ ಹೊತ್ತಿಗೆ ನಿದ್ದೆಗೆಡಿಸಿದೆ.
ಹಾಗಾಗಿ ಮತ್ತೊಮ್ಮೆ ಕಠಿಣ ಕ್ರಮಗಳನ್ನು ಕೈಗೊಳ್ಳುವ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಇದೇ 27ರಂದು ವಿಡೀಯೋ ಕಾನ್ಫರೆನ್ಸ್ ನಡೆಸಲಿರುವ ಹಿನ್ನೆಲೆಯಲ್ಲಿ ಅದರ ಪೂರ್ವ ಸಿದ್ಧತೆಯಾಗಿಯೂ ಈ ಸಭೆಯಲ್ಲಿ ಚರ್ಚೆ, ಮಾಹಿತಿ ಸಂಗ್ರಹ ನಡೆಯಲಿದೆ.
CM will be holding a meeting today ie Monday the 25th April at 12.30 pm at Krishna office to review the latest position pertaining to Covid.
CM desires the presence of following Ministers/ officers.
1) Revenue Minister & Principal secretary, Revenue Department.
2) Health Minister & Principal secretaries of Health and Medical Education along with Health Commissioner.
3) Higher Education and IT and BT Minister
4)TAC Chairman and Members
Chief Secretary/ACS and Development Commissioner/ACS Requested to attend the said meeting .
ಕೋವಿಡ್ ಕುರಿತು ಏಪ್ರಿಲ್ 27 ರಂದು ಪ್ರಧಾನಮಂತ್ರಿ ವೀಡಿಯೊ ಸಂವಾದ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ